ಮಡಿಕೇರಿ: ಕೊರೊನಾ ಮಾಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನರು ಅತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ಕೊಡಲು ಮುಂದಾಗಿದೆ. ಅದರೆ ಜಿಲ್ಲೆಯ ಸರ್ಕಾರಿ ವೈದ್ಯರೊಬ್ಬರು ಹಣಕ್ಕಾಗಿ ವ್ಯಾಕ್ಸಿನನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.
Advertisement
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಸ್ಪತ್ರೆಯೊಂದರಲ್ಲಿ ಹಣಕ್ಕೆ ವ್ಯಾಕ್ಸಿನ್ ಮಾರಲಾಗುತ್ತಿದೆ ಎಂದು ಅಪ್ಪಚ್ಚು ರಂಜನ್ ಅವರು ಉಸ್ತುವಾರಿ ಸಚಿವರ ಸಭೆಯಲ್ಲಿ ಗಂಭೀರ ಅರೋಪ ಮಾಡಿದ್ದಾರೆ. ಸೋಮವಾರಪೇಟೆ ತಾಲೂಕಿನ ಹೋಬಳಿ ಮಟ್ಟದ ಅಸ್ಪತ್ರೆಯೊಂದರಲ್ಲಿ ಅಲ್ಲಿನ ವೈದ್ಯರಿಂದಲ್ಲೇ ರೆಮ್ಡಿಸಿವಿರ್ ಮತ್ತು ವ್ಯಾಕ್ಸಿನ್ ಮಾರಾಟ ಆಗುತ್ತಿದೆ ಎಂಬ ಅರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಿನ್ನೆ ದಿನ ತಾಲೂಕಿನ 5 ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದೇನೆ. ಈ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯರು ವ್ಯಾಕ್ಸಿನ್ ಮಾರಾಟದ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದ್ದಾರೆ.
Advertisement
Advertisement
ಈ ಕುರಿತು ಮಾಹಿತಿ ಸಿಕ್ಕೊಡನೆ ಆಸ್ಪತ್ರೆಯ ವೈದ್ಯರನ್ನು ಕರೆದು ತರಾಟೆಗೆ ತೆಗೆದುಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಈ ಬಗ್ಗೆ ಅರೋಗ್ಯಧಿಕಾರಿ ಹಾಗೂ ಎಸ್.ಪಿ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ನಾವು ಕೂಡ ಇನ್ನೂ ಮುಂದೆ ಸ್ವಲ್ಪ ಜನರನ್ನು ಬಿಟ್ಟು ಫಾಲೋ ಅಪ್ ಮಾಡುತ್ತೇವೆ. ಜಿಲ್ಲೆಯ ಅರೋಗ್ಯ ಕೇಂದ್ರಗಳಲ್ಲಿ ಪರಿಶೀಲನೆ ಮಾಡುತ್ತೇವೆ. ಈ ರೀತಿ ಮಾಡುವವರು ಸಿಕ್ಕಿಬಿದ್ದರೆ ಅವರಿಗೆ ತಕ್ಕ ಶಿಕ್ಷೆ ಆಗುವವರೆಗೆ ಬಿಡುವುದಿಲ್ಲ ಎಂದು ಅಪ್ಪಚ್ಚು ರಂಜನ್ ಅಕ್ರೋಶ ವ್ಯಕ್ತಪಡಿಸಿದರು.
Advertisement