ಬೆಂಗಳೂರು: ಸೆಪ್ಟೆಂಬರ್ 25ರಿಂದ ಲಾಕ್ಡೌನ್ ಮಾಡಲಾಗುತ್ತೆ ಎಂದು ಹೇಳಲಾಗುತ್ತಿರುವ ಆದೇಶದ ಪ್ರತಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ಸುದ್ದಿ ಸುಳ್ಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಲಾಕ್ಡೌನ್ ಮಾಡುವ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಪಿಐಬಿ ಸ್ಪಷ್ಟನೆ ನೀಡಿದೆ.
Advertisement
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ)ಲಾಕ್ಡೌನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂಬಂತೆ ತೋರಿಸಲಾಗಿದೆ. ಕೇಂದ್ರ ಸರ್ಕಾರದ ಲೆಟರ್ ಹೆಡ್ ನಲ್ಲಿರುವಂತೆ ಪ್ರತಿ ಮುದ್ರಣಗೊಂಡಿದೆ.
Advertisement
Advertisement
ವೈರಲ್ ಫೋಟೋದಲ್ಲಿ ಏನಿದೆ?: ಮುಂಜಾಗ್ರತ ಕ್ರಮಗಳನ್ನ ಕೈಗೊಂಡರು ದೇಶದಲ್ಲಿ ಸಾಂಕ್ರಾಮಿಕ ರೋಗ ಕೊರೊನಾ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಈ ಹಿನ್ನೆಲೆ ಎನ್ಡಿಎಂಎ ಮತ್ತು ಯೋಜನಾ ಆಯೋಗ ಮತ್ತೆ ಲಾಕ್ಡೌನ್ ಮಾಡುವಂತೆ ಪ್ರಧಾನಿಗಳಿಗೆ ಮನವಿ ಮಾಡಿಕೊಳ್ಳುತ್ತಿದೆ. ಸೆಪ್ಟೆಂಬರ್ 25ರ ಮಧ್ಯರಾತ್ರಿಯಿಂದ ಜಾರಿ ಆಗುವಂತೆ 46 ದಿನ ದೇಶದಲ್ಲಿ ಲಾಕ್ಡೌನ್ ಮಾಡಲಾಗುವುದು. ಹಾಗಾಗಿ ಗೃಹ ಇಲಾಖೆ ಲಾಕ್ಡೌನ್ ಗೆ ತಯಾರಿ ಮಾಡಿಕೊಳ್ಳಬೇಕೆಂದು ನಕಲು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.