ಮಂಗಳೂರು: ಜಿಲ್ಲೆಯಲ್ಲಿ ಸರಿಯಾದ ಮಾಹಿತಿ ಇಲ್ಲದೆ ವ್ಯಾಕ್ಸಿನ್‍ಗಾಗಿ ಪುಂಜಾಲಕಟ್ಟೆ ಲಸಿಕಾ ಕೇಂದ್ರದಲ್ಲಿ ಜನ ಮುಗಿ ಬಿದ್ದ ದೃಶ್ಯ ಕಂಡುಬಂದಿದೆ. ಇದನ್ನೂ ಓದಿ: ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯಕ್ಕೆ ಅಸಲಿ ಕಾರಣವೇನು ಗೊತ್ತಾ?
Advertisement
ರಾಜ್ಯದಲ್ಲೇ ನಿನ್ನೆ ಎರಡನೇ ಅತೀ ಹೆಚ್ಚು ವ್ಯಾಕ್ಸಿನೇಷನ್ ಆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ವ್ಯಾಕ್ಸಿನ್‍ಗಾಗಿ ಜನ ಮುಗಿ ಬೀಳುತ್ತಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಬೇಡಿಕೆ ಹೆಚ್ಚಾಗಿದೆ. ಬೆಳ್ತಂಗಡಿಯ ಪುಂಜಾಲಕಟ್ಟೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಜನ ವ್ಯಾಕ್ಸಿನ್‍ಗಾಗಿ ಇಂದು ಮುಗಿ ಬಿದ್ದಿದ್ದರು. ಇಂದು ಕೋವ್ಯಾಕ್ಸಿನ್ ಎರಡನೇ ಡೋಸ್ ನೀಡಲಾಗುತ್ತಿದ್ದು, ಆದರೆ ಜನ ಮೊದಲನೇ ಡೋಸ್ ಸಿಗುತ್ತೆ ಎಂದು ಎಲ್ಲಾ ಕಡೆಗಳಲ್ಲಿ ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದರು. ಇಂದಿನಿಂದ ಎಲ್ಲಾ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮುಕ್ತವಾಗಿ ನೀಡುತ್ತಿದ್ದು, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಶೀಲ್ಡ್‍ನ್ನು ಮೊದಲನೇ ಡೋಸ್ ನೀಡಲಾಗುತ್ತಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‍ಗೆ ಹೊಸ ಮಾನದಂಡ ಪ್ರಕಟ – ಪಬ್ಲಿಕ್ ಟಿವಿ ಸಲಹೆ ಸ್ವೀಕರಿಸಿದ ಶಿಕ್ಷಣ ಇಲಾಖೆ
Advertisement
Advertisement
ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,44,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Advertisement
India reports 1,20,529 new #COVID19 cases, 1,97,894 discharges, and 3,380 deaths in the last 24 hours, as per Health Ministry
Total cases: 2,86,94,879
Total discharges: 2,67,95,549
Death toll: 3,44,082
Active cases: 15,55,248
Total vaccination: 22,78,60,317 pic.twitter.com/oF9tm1scaX
— ANI (@ANI) June 5, 2021
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.