ಹಾವೇರಿ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದಿದೆ.
Advertisement
Advertisement
Advertisement
Advertisement
ಗ್ರಾಮದ ಚಂದ್ರಪ್ಪ ಬೂದಿಹಳ್ಳಿ ಮತ್ತು ನಿಂಗಪ್ಪ ಬೂದಿಹಳ್ಳಿ ಅವರ ಮನೆ ಹಾನಿಗೊಳಗಾಗಿದೆ. ಮನೆಯಲ್ಲಿದ್ದ ಲಕ್ಷಾಂತರ ರುಪಾಯಿ ಮೌಲ್ಯದ ವಸ್ತುಗಳು ಹಾಗೂ ಮನೆಯ ಮೇಲ್ಛಾವಣಿ ಸಂಪೂರ್ಣ ಸುಟ್ಟು ಹಾನಿಯಾಗಿದೆ. ಬೆಂಕಿ ಕಾಣಿಸಿಕೊಳ್ತಿದ್ದಂತೆ ಮನೆಯಿಂದ ಹೊರಗೆ ಬಂದಿದ್ದರಿಂದ ಮನೆಯವರು ಅದೃಷ್ಟವಶಾತ್ ಪಾರಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಮಾಡಿದ್ದಾರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.