ಬೆಂಗಳೂರು: ಶಾಲೆಗಳು ಪುನರಾರಂಭಕ್ಕೆ ಇನ್ನೂ ಆಲೋಚನೆ ಮಾಡಿಲ್ಲ, ಶಿಕ್ಷಣ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದ್ದು ಸೋಮವಾರ ಆಯುಕ್ತರು ವರದಿ ನೀಡಿದ ಬಳಿಕ ಶಾಲೆಗಳ ಆರಂಭಿಸುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Advertisement
ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಕೆಆರ್ ಪುರದ ಐಟಿಐ ವಿದ್ಯಾಮಂದಿರ, ಸರ್ಕಾರಿ ಪಬ್ಲಿಕ್ ಶಾಲೆ, ಎಸ್ಜೆಇಎಸ್, ಬಿವಿಎನ್ ಹೆಚ್.ಎಸ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ, ರಾಜ್ಯಾದ್ಯಂತ 99.6% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.
Advertisement
Advertisement
ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸುವ ಬಗ್ಗೆ ಮಾತನಾಡಿ, ಐಸಿಎಂಆರ್ ನಿಂದಲೂ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ವರದಿ ಬಂದಿದೆ. ಇದರೊಂದಿಗೆ ದೇವಿ ಶೆಟ್ಟಿ ಅವರು ಕೊಟ್ಟಿರುವ ವರದಿಯನ್ನು ಅಧ್ಯಯನ ಮಾಡಿ ತದನಂತರ ಶಾಲೆಗಳನ್ನು ಅರಂಭಿಸುವ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ಬಿಎಸ್ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ
Advertisement