ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಸ್ವತಃ ರೇಣುಕಾಚಾರ್ಯ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ ಗೆ ಒಳಗಾಗಿದ್ದೇನೆ.
ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ.#Covid19
— M P Renukacharya (@MPRBJP) April 18, 2021
Advertisement
ರೇಣುಕಾಚಾರ್ಯ ಸಿಎಂ ಜೊತೆ ಸಂಪರ್ಕದಲ್ಲಿದ್ದರು. ಎರಡು ದಿನಗಳ ಹಿಂದೆ ಕೋವಿಡ್ ಟೆಸ್ಟ್ ಮಾಡಿಸಿದ್ದು, ಇಂದು ಬಂದ ವರದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.
Advertisement
Advertisement
ರ್ಯಾಪಿಡ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿತ್ತು, ಆರ್ ಟಿಪಿಸಿಆರ್ ನಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ಹೋಮ್ ಐಸೋಲೇಶನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಸಂಜೆಯಷ್ಟೇ ಹೊನ್ನಾಳಿ ತಾಲೂಕು ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ಭೇಟಿ ನೀಡಿ, ಆಸ್ಪತ್ರೆಯ ಸ್ಥಿತಿಗತಿ ಕುರಿತು ರೇಣುಕಾಚಾರ್ಯ ಪರಿಶೀಲಿಸಿದ್ದರು. ಬಳಿಕ ವೈದ್ಯರ ಜೊತೆ ಮಾತುಕತೆ ನಡೆಸಿ ಮಾಹಿತಿಯನ್ನು ಸಹ ಪಡೆದಿದ್ದರು.