– 3 ವಾರಗಳ ಕಾಲ ಶಾಲೆಗಳಿಗೆ ರಜೆ
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಸರ್ಕಾರ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಮಧ್ಯಂತರ ರಜೆ ಘೋಷಿಸಿದೆ.
ಶಿಕ್ಷಕರ ಹಾಗೂ ಮಕ್ಕಳ ಹಿತದೃಷ್ಟಿಯಿಂದ 3 ವಾರಗಳ ಕಾಲ ರಜೆ ಶಾಲೆಗಳಿಗೆ ಘೋಷಣೆ ಮಾಡಿ ಸಿಎಂ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12 ರಿಂದ 30 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲಾಗಿದೆ. ಕೊರೊನಾದ ಸಂಕಷ್ಟದ ಕಾಲದಲ್ಲೂ ಶಿಕ್ಷಕರು ಶಾಲೆಗಳಿಗೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಕನಿಷ್ಟ ಮಧ್ಯಂತರ ರಜೆಯನ್ನು ಅವರಿಗೆ ನೀಡಿಲ್ಲ. ಇದೀಗ ದಸರಾ ರಜೆ ಹಿನ್ನೆಲೆ ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ಸರ್ಕಾರ ಘೋಷಿಸಿದೆ.
Advertisement
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಮತ್ತು ವಿದ್ಯಾಗಮ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿರುವುದರಿಂದ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ದಿನಾಂಕ 12-10-2020 ರಿಂದ 30-10-2020 ರವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ಘೋಷಿಸಲು ಮುಖ್ಯಮಂತ್ರಿ @BSYBJP ಆದೇಶಿಸಿದ್ದಾರೆ pic.twitter.com/uigK7gHhQo
— CM of Karnataka (@CMofKarnataka) October 11, 2020
Advertisement
ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಧ್ಯಂತರ ರಜೆ ನೀಡುವಂತೆ ಬೆಳಗ್ಗೆಯಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಜೆ ಘೋಷಿಸಿದ್ದಾರೆ. ಶಿಕ್ಷಕರು ನಾಳೆಯಿಂದಲೇ ರಜೆ ಪಡೆಯಬಹುದಾಗಿದೆ. ಇದನ್ನೂ ಓದಿ: ಎತ್ತಿಗೆ ಜ್ವರ ಬಂದ್ರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸ್ತಿದೆ- ಶಿಕ್ಷಕರಿಗೆ ರಜೆ ನೀಡದ್ದಕ್ಕೆ ಎಚ್ಡಿಕೆ ಆಕ್ರೋಶ
Advertisement
Advertisement
ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ನೀಡದ್ದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕುಮಾರಸ್ವಾಮಿ ಶಿಕ್ಷಕರ ಪರ ಸರಣಿ ಟ್ವೀಟ್ ಮಾಡಿ ರಜೆ ನೀಡದ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದರು. `ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೊನಾದ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದ್ದರು.
ಸರ್ಕಾರಿ ಶಾಲೆ ಶಿಕ್ಷಕರು ಕೋವಿಡ್ ಕರ್ತವ್ಯ ಹಾಗೂ ವಿದ್ಯಾಗಮ ಯೋಜನೆಯಡಿ ಈ ದಿನದ ತನಕ ಕೆಲಸ ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.