ಬೆಂಗಳೂರು: ನಟ ಸಂಚಾರಿ ವಿಜಯ್ ಮೆದಳು ಡೆಡ್ ಆಗಿದ್ದು, ರಾತ್ರಿ 9.30ಕ್ಕೆ ಅಂಗಾಂಗ ದಾನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯ ಅರುಣ್ ನಾಯ್ಕ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಡೆಸಿದ ಅಪೋಲೋ ಆಸ್ಪತ್ರೆ ವೈದ್ಯರು, ಸಂಜೆ ಏಳೂವರೆಗೆ ನಡೆಸಿದ ಪರೀಕ್ಷೆಯಲ್ಲಿ ಬ್ರೈನ್ ಡೆಡ್ ಆಗಿದೆ. ಜೀವ ಸಾರ್ಥಕತೆ ತಂಡದಿಂದ ಅಂಗಾಂಗ ದಾನದ ಪ್ರಕ್ರಿಯೆ ಆರಂಭಗೊಳ್ಳಲಿದೆ. ಅಂಗಾಂಗ ಕಸಿ ಪ್ರಕ್ರಿಯೆ ರಾತ್ರಿಯೇ ನಡೆಯಲಿದೆ. ದೇಹದ ಪಲ್ಸ್ ರೇಟ್, ರಕ್ತದೊತ್ತಡ ಸ್ಟೇಬಲ್ ಆಗಿದ್ದು, ಅಂಗಾಂಗ ಕಸಿ ಆಗೋವರೆಗೂ ಇದೇ ರೀತಿ ಇರಲಿದೆ. ಈ ಪ್ರಕ್ರಿಯೆ ಮುಗಿಯುವವರೆಗೂ ಸ್ಟೇಬಲ್ ಆಗಿರುತ್ತದೆ ಎಂದು ಮಾಹಿತಿ ನೀಡಿದರು.
Advertisement
Advertisement
ಎರಡು ಕಿಡ್ನಿ, ಎರಡು ಕಣ್ಣು, ಲಿವರ್ ಅಂಗಾಂಗ ದಾನ ಮಾಡಲಾಗುತ್ತದೆ. ವೇಟಿಂಗ್ ಲಿಸ್ಟ್ ಮೂಲಕ ಅವಶ್ಯಕತೆ ಇರೋ ಆಸ್ಪತ್ರೆಗಳಿಗೆ ನೀಡಲಾಗುತ್ತದೆ. ನಮ್ಮ ಆಸ್ಪತ್ರೆಯಲ್ಲಿ ಕೆಲ ರೋಗಿಗಳಿಗೆ ಕಸಿ ಮಾಡುವ ಸಾಧ್ಯತೆಗಳಿವೆ. ಅಂಗಾಂಗ ಕಸಿ ಬಳಿಕ ಮೃತದೇಹವನ್ನ ನಾಳೆ ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದರು.
Advertisement
Advertisement
ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟ ಎಂಬುದಾಗು ವೈದ್ಯರು ಬೆಳಗ್ಗೆ ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಸಂಚಾರಿ ವಿಜಯ್ ತಲೆಯ ಬಲಭಾಗಕ್ಕೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಸ್ಥಳೀಯರು ಅವರನ್ನು ಬನ್ನೇರುಘಟ್ಟ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.