ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಇವತ್ತು ಸಿಎಂ ಆಪ್ತ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ರೋಷಾವೇಶ ಜೋರಾಗಿತ್ತು ಎನ್ನಲಾಗಿದೆ. ಇಬ್ಬರು ಸಿಎಂ ಆಪ್ತ ಸಚಿವರ ನಡುವೆ ಕಾವೇರಿದ ಚಕಮಕಿ ಆಗಿದ್ದು, ಸಿಎಂ (Siddaramaiah) ಇಬ್ಬರನ್ನ ಸಮಾಧಾನಪಡಿಸಿದ್ರು ಎಂದು ಮೂಲಗಳಿಂದ ಗೊತ್ತಾಗಿದೆ.p
ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಜಟಾಪಟಿ ನಡೆದಿದ್ದು, ನಾನು ಎದ್ದು ಹೊರಟೇ ಬಿಡುತ್ತೇನೆ ಎಂದು ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರಿಯಾಗಿ ಬಳಕೆ ಆಗುತ್ತಿಲ್ಲ, ಹಂಚಿಕೆ ಆದ ಹಣವನ್ನ ಬೇರೆ ಕಡೆ ಬಳಕೆ ಮಾಡುತ್ತಿದ್ದೀರಿ. ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಈಗ ಹಣ ಕೊಡಿ ಅಂದ್ರೆ ಅಂತಾ ಜೋರು ದ್ಚನಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ
ಸ್ವತಃ ಸಿಎಂ ಅವರ ಬಳಿಯೂ ಕೂಗಾಡಿದ್ದಾರೆ ಎನ್ನಲಾಗಿದೆ. ಏಕಾಏಕಿ ಮಹದೇವಪ್ಪ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆಗಿದ್ದರು. ಆದಾದ ಬಳಿಕ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ನಾವು ಮೂವರು ಕುಳಿತು ಮಾತಾಡೋಣ. ವಿದ್ಯುತ್ ಶುಲ್ಕ ಹೆಚ್ಚಳದ ಬಗ್ಗೆ ತೀರ್ಮಾನ ಮಾಡೋಣ ಎಂದು ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು

