ಬೆಂಗಳೂರು: ಅಬಕಾರಿ ಸಚಿವ ಕೆ. ಗೋಪಾಲಯ್ಯ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಎಸಿಬಿಗೆ ದೂರು ನೀಡಿದೆ.
ಇತ್ತೀಚೆಗೆ ಕೊಪ್ಪಳ ಅಬಕಾರಿ ಉಪ ಆಯುಕ್ತೆ ಸೆಲೆನಾ, ಮತ್ತು ಅಬಕಾರಿ ನಿರೀಕ್ಷಕ ಅಜಯ್ ಮಧ್ಯೆ ನಡೆದ ಫೋನ್ ಸಂಭಾಷಣೆ ವೈರಲ್ ಆಗಿತ್ತು. ಪ್ರತೀ ಜಿಲ್ಲೆಯಿಂದ 5 ಲಕ್ಷ ಹಣ ಸಂಗ್ರಹಿಸಿ ಸಚಿವರಿಗೆ ಕೊಡಬೇಕು. ಹಿರಿಯ ಅಧಿಕಾರಿಗಳು ಹೇಳಿದ್ದಾರೆ ಹಣ ಸಂಗ್ರಹಿಸಿ ಅಂತಾ ಸೆಲೆನಾ ಫೋನಿನಲ್ಲಿ ಮಾತನಾಡಿದ್ದರು. ಇದನ್ನೂ ಓದಿ: ಲಾಕ್ಡೌನ್ನಲ್ಲಿ ಅಬಕಾರಿ ಇಲಾಖೆಗೆ ಶೇ.10 ಲಾಭ ಹೆಚ್ಚಳ – ಗೋಪಾಲಯ್ಯ
Advertisement
Advertisement
ಆಡಿಯೋ ವೈರಲ್ ಆದ ನಂತರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಮಂತ್ರಿಗಳು ಕೂಡಿ ಮಾಡುತ್ತಿರುವ ಭ್ರಷ್ಟಾಚಾರ ಇದಾಗಿದೆ. ಇಲಾಖೆಯಲ್ಲಿ ಅಕ್ರಮವಾಗಿ ಹಣ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.