ಬೆಂಗಳೂರು: ಕೊರೊನಾ ಸೋಂಕು ಧೃಡಪಟ್ಟ ಬಳಿಕ ಹೋಂ ಐಸೋಲೇಷನ್ ನಲ್ಲಿದ್ದ ಸಚಿವ ಸುರೇಶ್ ಕುಮಾರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಚಿವರು ಬರೆದುಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ. ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಕಳೆದ ಸೋಮವಾರದಿಂದ ನಾನು ಕೋವಿಡ್ 19 ವೈರಸ್ ಪೀಡಿತನಾಗಿ ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದೆ.
ವೈದ್ಯರ ಸಲಹೆ ಮೇರೆಗೆ ನಾನು ಈಗ ಬೆಂಗಳೂರಿನಲ್ಲಿಯೇ ಗೆಳೆಯರೊಬ್ಬರ ಚಿಕ್ಕ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದೇನೆ. ವೈದ್ಯರ ನಿಗಾದಲ್ಲಿದ್ದೇನೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯಿಂದಲೂ ನನ್ನ ಆರೋಗ್ಯ ಸುಧಾರಿಸುತ್ತಿದೆ.
— S.Suresh Kumar (@nimmasuresh) October 11, 2020
Advertisement
ಹೋಂ ಐಸೋಲೇಷನ್ ನಲ್ಲಿದ್ದರೂ ಸಚಿವರು ಆನ್ಲೈನ್ ಮೂಲಕ ಸರ್ಕಾರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಫೇಸ್ಬುಕ್ ಲೈವ್ ಮೂಲಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಫೇಸ್ಬುಕ್ ಲೈವ್ ಮೂಲಕ ಸುದ್ದಿಗೋಷ್ಠಿಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ.