ಕಾರವಾರ: ಜಿಲ್ಲೆಯ ಕಾಸರಕೋಡ ಬಂದರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಹಕಾರ ಅಗತ್ಯವಿದ್ದು, ಸರ್ವಪಕ್ಷದ ಸಭೆ ನಡೆಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಇದನ್ನೂ ಓದಿ: ಬಾದಾಮಿ ಜನ ಒಳ್ಳೆಯವರು, ಚಾಮುಂಡೇಶ್ವರಿ ಜನ ಸೋಲಿಸಿಬಿಟ್ರು: ಸಿದ್ದರಾಮಯ್ಯ
Advertisement
ಶಿರಸಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಅಹಂಕಾರ ತೋರುವುದಿಲ್ಲ. ಎಲ್ಲಾ ಪಕ್ಷಗಳ ಸಹಕಾರ ಅಗತ್ಯವಿದೆ. ಎಲ್ಲರ ಜೊತೆ ಒಂದು ವೇದಿಕೆಯಲ್ಲಿ ವಿಷಯ ಚರ್ಚಿಸಿ ಮೀನುಗಾರರ ಹಿತಕ್ಕೆ ಬದ್ದನಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ತೆರಿಗೆ ಕಟ್ಟಲು ಹಣವಿಲ್ಲ ಎಂದ ನಟ ದಳಪತಿ ವಿಜಯ್ಗೆ ಕೋರ್ಟ್ ಛೀಮಾರಿ
Advertisement
Advertisement
ಕಾಸರಕೋಡ ಬಂದರು ವಿಚಾರದಲ್ಲಿ ಸರ್ಕಾರದ ನಿಲುವೆ ನನ್ನ ನಿಲುವಾಗಿದೆ. ಮುಖ್ಯಮಂತ್ರಿ ನಿಲುವಿಗೆ ನನ್ನ ಬೆಂಬಲ ಇದೆ. ಅಭಿವೃದ್ದಿಗೆ ಅನೇಕ ಅಡೆತಡೆಗಳು ಬರುತ್ತವೆ. ಎಲ್ಲಾ ಯೋಜನೆ ಅನುಷ್ಠಾನ ಮಾಡುವಾಗ ಸಾಕಷ್ಟು ವಿರೋಧ ಎದಿರಾಗಿದೆ. ಅವನ್ನು ಮೀರಿ ಅಭಿವೃದ್ಧಿ ಆಗಬೇಕು. ಈ ಯೋಜನೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಾಲುದಾರರು. ಈ ಜಿಲ್ಲೆಯಲ್ಲಿ ಎಲ್ಲಾ ಯೋಜನೆಯಲ್ಲಿ ಜನ ನಿರಾಶ್ರಿತರಾಗಿದ್ದಾರೆ. ಮೀನುಗಾರರ ವಿಶ್ವಾಸಗಳಿಸಿ ಯೋಜನೆ ಅನುಷ್ಠಾನ ಮಾಡಲಾಗುವುದು. ಮೀನುಗಾರರ ರಕ್ಷಣೆ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಪಕ್ಷದ ಸಹಕಾರ ಬಯಸುತ್ತೇನೆ ಎಂದು ತಿಳಿಸಿದ್ದಾರೆ.
Advertisement