ಸಿಎಂ ಉದಾಸಿ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

Advertisements

ಬೆಂಗಳೂರು: ಮಾಜಿ ಸಚಿವ, ಹಾನಗಲ್ ಕ್ಷೇತ್ರದ ಶಾಸಕರಾಗಿದ್ದ ರಾಜ್ಯ ಬಿಜೆಪಿಯ ಹಿರಿಯ ಮುಖಂಡರಾದ ಸಿಎಂ ಉದಾಸಿ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

Advertisements

Advertisements

ಸಿಎಂ ಉದಾಸಿ ಅವರು ರಾಜ್ಯ ರಾಜಕಾರಣದ ಹಿರಿಯ ನಾಯಕರು. ಅವರಿಗೆ ಆಡಳಿತದಲ್ಲಿ ಅಪಾರ ಅನುಭವ ಇತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹತ್ತಿರದವರಾಗಿದ್ದರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಲೋಕೋಪಯೋಗಿ ಖಾತೆಗಳನ್ನು ಉದಾಸಿ ಅವರು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಉದಾಸಿ ಅವರು ಏಳು ಭಾಷೆಗಳನ್ನು ಬಲ್ಲ ಧೀಮಂತ ನಾಯಕ. ಅಂಥ ಮುತ್ಸದ್ದಿ ನಾಯಕನನ್ನು ಕಳೆದುಕೊಂಡು ರಾಜ್ಯ ಈಗ ಬಡವಾಗಿದೆ. ಇದರಿಂದ ಕರ್ನಾಟಕ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರೊಂದಿಗೆ ಮುಖ್ಯಮಂತ್ರಿ ಸಂವಾದ: ಕೋವಿಡ್ 19 ನಿರ್ವಹಣೆಗೆ ಮೆಚ್ಚುಗೆ

ವೈಯಕ್ತಿಕವಾಗಿ ಸಿಎಂ ಉದಾಸಿ ಅವರು ನನಗೆ ಗುರುಗಳು ಹಾಗೂ ಮಾರ್ಗದರ್ಶಕರು. ಅಂಥವರನ್ನು ಕಳೆದುಕೊಂಡಿರುವುದಕ್ಕೆ ನನಗೆ ಬಹಳ ದುಃಖವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

Advertisements

 

Advertisements
Exit mobile version