ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸ್ಥಾನಗಳಿಗೆ ಏ.27 ರಂದು ಮತದಾನ ನಡೆದಿತ್ತು. ಇಂದು ಎರಡೂ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಹೊರ ಬಿದ್ದಿದ್ದು, ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿಯೇ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
Advertisement
ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 35 ವಾರ್ಡ್ ಗಳಿದ್ದು, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ವಾರ್ಡ್ ನಂಬರ್ 29ರ ಕಾಂಗ್ರೆಸ್ ಅಭ್ಯರ್ಥಿ ಮತದಾನಕ್ಕೂ ಮೊದಲೇ ಮೃತಪಟ್ಟಿದ್ದರಿಂದ ಈ ವಾರ್ಡ್ ನಲ್ಲಿ ಚುನಾವಣೆ ರದ್ದುಗೊಂಡಿತ್ತು. ಇನ್ನುಳಿದಂತೆ 34 ವಾರ್ಡ್ ಗಳಿಗೆ ಮತದಾನ ನಡೆದಿತ್ತು. 34 ಸ್ಥಾನಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 11, ಬಿಜೆಪಿ 4 ಹಾಗೂ ಪಕ್ಷೇತರ 1 ಸ್ಥಾನದಲ್ಲಿ ಗೆಲುವು ಕಂಡಿದ್ದಾರೆ.
Advertisement
Advertisement
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿಯೂ ಬಿಜೆಪಿ ಮುಗ್ಗರಿಸಿದೆ. ಕಳೆದ 25 ವರ್ಷದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿದ್ದ ಬಿಜೆಪಿಗೆ ಈ ಬಾರಿ ಮತದಾರರು ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ಅವರಿಗೆ ಮುಖಭಂಗ ಉಂಟಾಗಿದೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 15 ಸ್ಥಾನಗಳಿದ್ದು, ಕಾಂಗ್ರೆಸ್ 9 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಜೆಪಿ ಕೇವಲ 6 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
Advertisement
ಫಲಿತಾಂಶದ ಬಗ್ಗೆ ಪ್ರತಿಕ್ರಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಭದ್ರಾವತಿಯಲ್ಲಿ ಈ ಬಾರಿ ಹೆಚ್ಚು ಸ್ಥಾನ ಗಳಿಸಬೇಕು ಎಂಬ ದೃಷ್ಟಿಯಿಂದ ಸಾಕಷ್ಟು ಸಂಘಟನೆ ಮಾಡಿದ್ದೆವು. ಆದರೆ ಮತದಾರರು ನಮಗೆ 4 ಸ್ಥಾನ ನೀಡಿದ್ದಾರೆ. ಕಳೆದ ಬಾರಿ ಬಿಜೆಪಿ 2 ಸ್ಥಾನ ಪಡೆದಿತ್ತು. ಜೊತೆಗೆ ಕಳೆದ ಬಾರಿ ಎಲ್ಲ ವಾರ್ಡ್ ಗಳಿಗೂ ಅಭ್ಯರ್ಥಿ ಹಾಕುವುದು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಎಲ್ಲ ವಾರ್ಡ್ ಗಳಿಗೂ ಅಭ್ಯರ್ಥಿ ಹಾಕಿದ್ದೆವು. ಜೊತೆಗೆ 4 ಸ್ಥಾನಗಳಲ್ಲಿ ಗೆಲುವು ಕಂಡಿದ್ದೇವೆ.
ತೀರ್ಥಹಳ್ಳಿಯಲ್ಲಿ ಅಧಿಕಾರ ಏಕೆ ಕೈ ತಪ್ಪಿ ಹೋಯಿತು ಗೊತ್ತಾಗುತ್ತಿಲ್ಲ. ಈ ಬಗ್ಗೆ ಜಿಲ್ಲಾ ಸಮಿತಿ ಹಾಗೂ ಸ್ಥಳೀಯ ಶಾಸಕರ ಜೊತೆ ಚರ್ಚಿಸುತ್ತೇನೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.