ನವದೆಹಲಿ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಸಹಾಯಕರಾಗಿದ್ದು ಸರ್ಕಾರದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ. ಸರ್ಕಾರದ ಎಲ್ಲ ವೈಫಲ್ಯಗಳನ್ನು ಮುಚ್ಚಿಡಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕೊರೊನಾ ಮತ್ತು ಪ್ರವಾಹ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಇರಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಆದರೆ ಸಿಎಂ ಆದೇಶವನ್ನು ಪಾಲಿಸಿಲ್ಲ. ಬೆಳಗಾವಿಯಲ್ಲಿ ಸೈಕಲ್ ಮೇಲೆ ಕೊರೊನಾ ಸೋಂಕಿತ ವ್ಯಕ್ತಿಯ ಮೃತ ದೇಹವನ್ನು ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
Advertisement
Advertisement
ಮೊದಲು ಬಳ್ಳಾರಿಯಲ್ಲಿ ಹೆಣ ಬಿಸಾಕಿದರು. ಈಗ ಬೆಳಗಾವಿಯ ಸರದಿ, ಬಿಜೆಪಿ ಆಡಳಿತದಲ್ಲಿ ದೇಶದ ಗೌರವ ಹಾಳಾಯಿತು. ನಿಮ್ಮ ಹೆಣ, ನಮ್ಮ ಹೆಣ ಹೀಗಾಗಿದ್ರೆ ಸಹಿಸುತ್ತಿದ್ದವಾ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೋಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Advertisement
ಡಿ.ಜೆ. ಹಳ್ಳಿ- ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿ, ಬಿಜೆಪಿಯವರಿಗೆ ಅಧಿಕಾರಿಗಳ ಮೇಲೆ ವಿಶ್ವಾಸವಿಲ್ಲ ಸಿಎಂ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಕಮಿಷನರ್ ಮೇಲೆ ತನಿಖೆ ಮಾಡುತ್ತಿದ್ದಾರೆ, ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ತನಿಖೆ ಮಾಡಲು ಹೊರಟಿದ್ದಾರೆ. ಇದಕ್ಕಿಂತ ಇನ್ನೊಂದು ದುರಂತ ಇನ್ನೊಂದಿಲ್ಲ ಇದನ್ನೆಲ್ಲ ನೋಡಿದ್ರೆ ಸರ್ಕಾರದ ವೈಫಲ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕಿಲ್ಲ ಎಂದರು.
Advertisement
ಕೊರೊನಾ ಸಂದರ್ಭದಲ್ಲಿ ಎಲ್ಲಾ ವ್ಯವಸ್ಥೆ ಬದಲಾಗಿದ್ದು, ಮಂತ್ರಿಗಳನ್ನು ಬದಲಾವಣೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅಧಿಕಾರಿಗಳನ್ನು ಬದಲಿಸಿದ್ದಾರೆ. ಯಡಿಯೂರಪ್ಪ ಅವರು ಅಸಹಾಯಕರಾಗಿದ್ದಾರೆ ಎಂದ ಡಿಕೆಶಿ ಡಿ.ಜೆ. ಹಳ್ಳಿ ಪ್ರಕರಣದಲ್ಲಿ ಯಾವ ರಾಜಕೀಯವೂ ಇಲ್ಲ. ಸರ್ಕಾರ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಕಾರ್ಪೊರೇಟರ್ ಗಳಿಗೂ ಗಲಭೆಗೂ ಸಂಬಂಧ ಇಲ್ಲ, ಪ್ರಸನ್ನ ಕುಮಾರ್, ಅಖಂಡ ನಡುವೆ ಕೂಡ ಏನಿಲ್ಲ ಕಥೆ ಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಡಿಕೆಶಿ ಆರೋಪಿಸಿದರು.