ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಮತ್ತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಕೋರಿ ವಕೀಲ ಉಮೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ವಿಭಾಗೀಯ ಪೀಠದಲ್ಲಿ ನಡೆಯಿತು.
Advertisement
ವಿಚಾರಣೆ ನಡೆಸಿದ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ಐಟಿಗೆ ಸೂಚನೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಏ.17ಕ್ಕೆ ಹೈಕೋರ್ಟ್ ಮುಂದೂಡಿದೆ.
Advertisement
Advertisement