ತುಮಕೂರು: ಆರ್. ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿತರತ್ನ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ಮುನಿರತ್ನ ಅವರು ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗಸ್ವಾಮಿಜಿಗಳ ಆಶೀರ್ವಾದ ಪಡೆದಿದ್ದಾರೆ.
Advertisement
Advertisement
ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಂಗಾ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದೆನೆ. ಮಹಾಸ್ವಾಮಿಗಳ ಸೇವೆ ಸೂರ್ಯ-ಚಂದ್ರ ಇರೋವರೆಗೆ ನೆನಪಲ್ಲಿ ಇರುತ್ತದೆ. ಸಿದ್ದಗಂಗಾ ಶ್ರೀಗಳ ಆಶೀರ್ವಾದ ನನ್ನ ಮೇಲಿದೆ. ನನ್ನ ಅಭಿವೃದ್ಧಿ ಕೆಲಸ ಹಾಗೂ ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದ ನಾನು ಗೆಲುವು ಸಾಧಿಸುತ್ತೆನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದೆ. ಆರ್ಆರ್ ನಗರದಲ್ಲಿ ಈಗಾಗಲೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದೆ. ನಾಳೆ ನಾಮಪತ್ರಗಳ ಪರಿಶೀಲನೆ ಇದ್ದು, ಅಕ್ಟೋಬರ್ 19ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಆರ್.ಆರ್.ನಗರ ಉಪಚುನಾವಣೆ – ಕೋಟ್ಯಧೀಶೆ, ಸಾಲಗಾರ್ತಿ ಆಗಿದ್ದಾರೆ ಕುಸುಮಾ
ಆರ್ಆರ್ನಗರದಲ್ಲಿ ಕಾಂಗ್ರೆಸ್ಸಿನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ. ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ.