– ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿಲ್ಲ
ಚಿಕ್ಕಮಗಳೂರು: ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ, ಹಿಂದಿ ದಿವಸ್‍ಗೆ ವಿರೋಧ ಮಾಡುತ್ತಾರೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ವ್ಯಂಗ್ಯ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು. ದಾಸ್ಯದ ನೆನಪು ಅಳಿಸೋದಕ್ಕೆ ಕಾಂಗ್ರೆಸ್ ಹೈದ್ರಾಬಾದ್ ಕರ್ನಾಟಕ ಎಂದೇ ಹೇಳುತ್ತಿದ್ದರು. ಕಾಂಗ್ರೆಸ್ಸಿಗರು ಗುಲಾಮಗಿರಿಯ ಮಾನಸಿಕತೆಯಿಂದ ಹೊರಬಂದಿರಲಿಲ್ಲ, ಅದಕ್ಕೆ ಬಿಜೆಪಿ ಕಲ್ಯಾಣ ಕರ್ನಾಟಕ ಎಂದು ಹೆಸರಿಟ್ಟಿತ್ತು ಎಂದು ಕಾಂಗ್ರೆಸ್ ಮೇಲೆ ವಾಗ್ದಾಳಿ ಮಾಡಿದರು.
Advertisement
Advertisement
ಇದೇ ವೇಳೆ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಸಿಟಿ ರವಿ, ಸಿದ್ದರಾಮಯ್ಯ ಉರ್ದು ದಿವಸ್ ಆಚರಣೆ ಮಾಡಿ ಬರುತ್ತಾರೆ. ಆದರೆ ಹಿಂದಿ ದಿವಸ್‍ಗೆ ವಿರೋಧ ಮಾಡುತ್ತಾರೆ ಇದು ನಾಟಕ ಅಲ್ವಾ? ಟಿಪ್ಪು ಜಯಂತಿಯ್ನ ಕಾಂಗ್ರೆಸ್ ವೈಭವಿಸಕರಿಸಿ ಆಚರಿಸುತ್ತೆ. ಕಾಂಗ್ರೆಸ್‍ಗೆ ಕನ್ನಡದ ಬಗ್ಗೆ ಮಾತನಾಡೋ ನೈತಿಕತೆ ಎಲ್ಲಿದೆ. ಕನ್ನಡದ ಉಳಿವಿಗಾಗಿ ಮಾಡುವ ಎಲ್ಲಾ ಪ್ರಯತ್ನಕ್ಕೂ ನಮ್ಮ ಬೆಂಬಲವಿದೆ. ಕಾಂಗ್ರೆಸ್ ಹೋರಾಟ ಕನ್ನಡದ ಉಳಿವಿಗೋ, ಹಿಂದಿ ದ್ವೇಷಕ್ಕೋ ಎಂದು ಸಿಟಿ ರವಿ ಪ್ರಶ್ನೆ ಮಾಡಿದ್ದಾರೆ.
Advertisement
Advertisement
ಹಿಂದಿ ಕಾರಣಕ್ಕೆ ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆ ಬಂದ್ ಆಗಿಲ್ಲ. ಇಂಗ್ಲಿಷ್ ಕಾರಣಕ್ಕೆ ಸಾವಿರಾರು ಶಾಲೆ ಬಂದ್ ಆಗಿವೆ. ಇಂಗ್ಲಿಷ್ ಓಕೆ ಎಂದು ಹಿಂದಿ ದ್ವೇಷಿಸುವ ನಿಮ್ಮ ಉದ್ದೇಶವೇನು? ಹಿಂದಿಯನ್ನು ವಿರೋಧಿಸುವವರು ಸಂವಿಧಾನ, ಅಂಬೇಡ್ಕರ್ ಅವರನ್ನು ವಿರೋಧ ಮಾಡುತ್ತಾರೆ. ಅವತ್ತು ಒಪ್ಪಿಕೊಂಡ ಕಾಂಗ್ರೆಸ್ ಇವತ್ತು ಬಣ್ಣ ಬದಲಿಸಿದೆ ಅಂದರೆ ಅದು ಗೋಸುಂಬೆತನ ಎಂದು ಕಿಡಿಕಾರಿದ್ದಾರೆ.