ಬೆಂಗಳೂರು: ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏಕಪತ್ನಿವ್ರತಸ್ಥರಾ ಎಂದು ಸಚಿವ ಸುಧಾಕರ್ ಪ್ರಶ್ನೆ ಮಾಡಿದ್ದಾರೆ.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು ವಿಪಕ್ಷ ನಾಯಕರಿಗೆ ಸವಾಲು ಎಸೆದರು. ಕಾನೂನಿನ ಪ್ರಕಾರ ನ್ಯಾಯಾಲಯದಿಂದ ರಕ್ಷಣೆ ಪಡೆದಿದ್ದೇವೆ. ಆರೋಪಗಳನ್ನ ಮಾಡುವ ನಾಯಕರು ಸಂವಿಧಾನಕ್ಕೆ ಗೌರವ ನೀಡಬೇಕು. ರಾಷ್ಟ್ರೀಯ ನಾಯಕರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಮರ್ಯಾದೆ ಪುರುಷರು, ಶ್ರೀರಾಮಚಂದ್ರ ಅನ್ಕೊಂಡು ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ನೀವು ನಿಮ್ಮ ಜೀವನದಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿಲ್ವಾ? ಮಾನ್ಯ ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ ಯಾರು ಏನು ಮಾಡಿದ್ರು ಅನ್ನೋದು ಗೊತ್ತಾಗಲಿ. ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಏನು ಏಕಪತ್ನಿವ್ರತಸ್ಥರಾ? ನೈತಿಕತೆ ಬಗ್ಗೆ ಮಾತನಾಡೋರು ಮಾದರಿ ಆಗಿದ್ದರೆ ತನಿಖೆಗೆ ಎಲ್ಲರೂ ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದರು.
Advertisement
Advertisement
ಯಾವುದೇ ಧಾರ್ಮಿಕ ಜಾತ್ರೆ, ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ಒಂದು ತಿಂಗಳು ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳು ಕಷ್ಟವಾಗಲಿವೆ. ಪೂಜ್ಯ ಮಠಮಾನ್ಯಗಳವರು, ದೇವಸ್ಥಾನಗಳ ಪ್ರಮುಖರು ತಮ್ಮ ಸಮುದಾಯಕ್ಕೆ ಸಂದೇಶ ನೀಡಬೇಕು. ಜಾತ್ರೆ ಸಮಾರಂಭಗಳಿಗೆ ಜನರು ಬರದಂತೆ ಮನವಿ ಮಾಡಬೇಕು. ಕೆಲ ಚಲನಚಿತ್ರ ತಾರೆಯರು ಸಿನಿಮಾ ಪ್ರಚಾರಕ್ಕಾಗಿ ಸಾವಿರಾರು ಜನರನ್ನ ಸೇರಿಸಿರೋದನ್ನ ಗಮನಿಸಿದ್ದೇನೆ. ಸ್ಟಾರ್ ನಟರಿಗೂ ಸಾಮಾಜಿಕ ಜವಾಬ್ದಾರಿ ಇದೆ. ನೀವು ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಹೇಳಿ ಎಂದು ಚಲನಚಿತ್ರ ತಾರೆಯರಿಗೆ ಸುಧಾಕರ್ ಮನವಿ ಮಾಡಿಕೊಂಡರು.