ಚಂಡೀಗಢ: ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿಯೇ 2022ರ ಪಂಜಾಬ್ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸಿಧು ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ. ಹೀಗಾಗಿ ಅವರ ನೇತೃತ್ವದಲ್ಲಿಯೇ ಮುಂಬರುವ ಪಂಜಾಬ್ ಚುನಾವಣೆಯನ್ನು ಎದುರಿಸುತ್ತೇವೆ. ಆದರೆ ಈ ಕುರಿತು ಕಾಂಗ್ರೆಸ್ಸಿನ ರಾಷ್ಟ್ರಾಧ್ಯಕ್ಷರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಎಂದು ತಿಳಿಸಿದ್ದಾರೆ.
Advertisement
Advertisement
ಚರಣ್ ಜಿತ್ ಸಿಂಗ್ ಚನ್ನಿ ಅವರನ್ನು ಒಮ್ಮತದ ಅಭಿಪ್ರಾಯದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಇದು ಪೂರ್ವ ನಿಯೋಜಿತವಲ್ಲ ಎಂದು ಇದೇ ವೇಳೆ ರಾವತ್ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಚರಣ್ಜಿತ್ ಸಿಂಗ್ ಛನ್ನಿ ಮೇಲೆ 2018ರಲ್ಲಿ ಬಂದಿತ್ತು #MeToo ಆರೋಪ!
Advertisement
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮೂರು ಬಾರಿ ಶಾಸಕರಾಗಿದ್ದ ಸುಖ್ಜಿಂದರ್ ಸಿಂಗ್ ರಾಂಧವಾ, ನವಜೋತ್ ಸಿಂಗ್ ಸಿಧು ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡ ನಾಯಕರಾಗಿದ್ದ ಕಾರಣ ಕೊನೇ ಕ್ಷಣದವರೆಗೂ ಅವರೇ ಎಂದು ಸುದ್ದಿ ಹರಿದಾಡಿತ್ತು. ಆದರೆ ಅಂತಿಮ ಕ್ಷಣದಲ್ಲಿ ರಾಂಧಾವಾಗೆ ಶಾಕ್ ನೀಡಿ ಚರಣ್ಜಿತ್ ಸಿಂಗ್ ಮುಖ್ಯಮಂತ್ರಿ ಎಂದು ಹೈಕಮಾಂಡ್ ತಿಳಿಸಿತ್ತು.
Advertisement
ಪಂಜಾಬ್ ಕಾಂಗ್ರೆಸ್ಸಿನಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿತ್ತು. ಕಡೆಗೂ ಸಿಎಂ ಸ್ಥಾನಕ್ಕೆ ಶನಿವಾರ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದರು. ಬಳಿಕ ಸಿಎಂ ರೇಸ್ನಲ್ಲಿ ಪ್ರಬಲ ಅಭ್ಯರ್ಥಿಯಾಗಿ ನವಜೋತ್ ಸಿಂಗ್ ಸಿಧು ಹೆಸರು ಕೇಳಿಬಂದಿದೆ. ಈ ನಡುವೆ ಅಚ್ಚರಿಯ ಹೆಸರೆಂಬಂತೆ ಸುನಿಲ್ ಜಾಖರ್ ಅವರ ಹೆಸರು ಹರಿದಾಡುತ್ತಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ಸುಖ್ಜಿಂದರ್ ಸಿಂಗ್ ಕಡೆಗೆ ಒಲವು ವ್ಯಕ್ತಪಡಿಸಿತ್ತು. ಅಂತಿಮ ಕ್ಷಣದಲ್ಲಿ ಅಮರೀಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ದಲಿತ ನಾಯಕ ಚರಣ್ಜಿತ್ ಸಿಂಗ್ ಛನ್ನಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿದೆ. ಇದನ್ನೂ ಓದಿ: ಚರಣ್ಜಿತ್ ಸಿಂಗ್ ಛನ್ನಿ ಪಂಜಾಬ್ನ ನೂತನ ಸಿಎಂ
It (party face for upcoming State polls) will be decided by Congress president, but given the circumstances, elections will be fought with CM's cabinet under Punjab Pradesh Congress Committee, whose chief is Navjot Singh Sidhu. He is very popular…: Congress leader Harish Rawat pic.twitter.com/VDYVSh3Qic
— ANI (@ANI) September 19, 2021