ಚಿತ್ರದುರ್ಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ ಡಿಕ್ಕಿಯಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪದ ಆತಿಥ್ಯ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಮಾರ್ಗಮಧ್ಯೆ ಹಿರಿಯೂರು ತಾಲೂಕಿನ ಗುಯಿಲಾಳು ಟೋಲ್ ಸಮೀಪ ಸಚಿವರ ಬೆಂಗಾವಲು ವಾಹನಕ್ಕೆ ಲಾರಿ ಅಡ್ಡ ಬಂದಿದ್ದು, ಬೆಂಗಾವಲು ವಾಹನದ ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ವಾಹನವನ್ನು ನಿಯಂತ್ರಿಸಿದ್ದರಿಂದ ಬಾನೆಟ್ ಮಾತ್ರ ಜಖಂ ಆಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಲಾರಿ ಚಾಲಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
Advertisement
ಅಪಘಾತವಾದ ಹಿನ್ನಲೆಯಲ್ಲಿ ಇನ್ನೊಂದು ಬೆಂಗಾವಲು ವಾಹನದ ವ್ಯವಸ್ಥೆ ಮಾಡಿ, ಸಚಿವರನ್ನು ಕಳುಹಿಸಿಕೊಡಲಾಯಿತು. ಈ ಕುರಿತು ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.