-ಚಿಕಿತ್ಸೆ ಫಲಕಾರಿಯಾಗದೇ ಪತಿ ಸಾವು
ಲಕ್ನೋ: ಪತ್ನಿ ಪತಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮುರದಾನಗರದಲ್ಲಿ ನಡೆದಿದೆ.
ಮೂಲಚಂದ್ ತ್ಯಾಗಿ ಸಾವನ್ನಪ್ಪಿದ ಪತಿ. ಗುರುವಾರ ಮೂಲಚಂದ್ ಎರಡನೇ ಪತ್ನಿ ಜೊತೆ ಜಗಳವಾಡಿದ್ದಾನೆ. ಈ ವೇಳೆ ಕೋಪಗೊಂಡ ಪತ್ನಿ ಬೆಂಕಿ ಹಚ್ಚಿದ್ದಾಳೆ. ಕೂಡಲೇ ಮೂಲಚಂದ್ ನನ್ನು ಸಫ್ದರಜಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಲಚಂದ್ ದೇಹದ ಬಹುತೇಕ ಭಾಗ ಬೆಂಕಿಗೆ ಆಹುತಿಯಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
Advertisement
Advertisement
ತಂದೆಯನ್ನ ಆಸ್ಪತ್ರೆಗೆ ದಾಖಲಿಸಿರುವ ಮೊದಲ ಪತ್ನಿ ಮಗ ಚಿಕ್ಕಮ್ಮನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
Advertisement