– ಇಬ್ಬರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಒಪ್ಪಿಗೆ
ಮಡಿಕೇರಿ: ಸೀಲ್‍ಡೌನ್ ಏರಿಯಾಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಆತಂಕದಿಂದಲೇ ಪರೀಕ್ಷೆ ಬರೆಯಲು ಒಪ್ಪಿಗೆ ಸೂಚಿಸಿದ್ದಾರೆ.
Advertisement
ಈ ಕುರಿತು ಕೊಡಗು ಡಿಡಿಪಿಐ ಪೆರಿಗ್ರಿನ್ ಮಚ್ಚಾಡೋ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದು, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಎರಡು ಗ್ರಾಮಗಳಲ್ಲಿ ಸೋಮವಾರ ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಎರಡು ಗ್ರಾಮಗಳ ಇದೇ ಏರಿಯಾಗಳಲ್ಲಿ ಮೂವರು ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿದ್ದಾರೆ. ಜೂನ್ 25 ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಈ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆಯನ್ನು ಮಾಡಲಾಗಿದ್ದು, ಸೂಕ್ತ ಭದ್ರತೆಯನ್ನೂ ಒದಗಿಸಲಾಗುವುದು ಎಂದು ತಿಳಿಸಿದರು.
Advertisement
Advertisement
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೀಲ್‍ಡೌನ್ ಆಗಿರುವ ಶಿರಂಗಾಲ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿಗಳಿದ್ದಾರೆ. ಹಾಗೆ ದೊಡ್ಡಳ್ಳಿ ಗ್ರಾಮದಲ್ಲೂ ಒಬ್ಬ ವಿದ್ಯಾರ್ಥಿ ಇದ್ದಾನೆ. ದೊಡ್ಡಳ್ಳಿ ಗ್ರಾಮದ ವಿದ್ಯಾರ್ಥಿ ಆಗಸ್ಟ್ ತಿಂಗಳಲ್ಲಿ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದಾನೆ. ಹೀಗಾಗಿ ಆ ವಿದ್ಯಾರ್ಥಿಗೆ ಆಗಸ್ಟ್‍ನಲ್ಲೇ ಪರೀಕ್ಷೆ ನಡೆಸಲಾಗುವುದು. ಇನ್ನುಳಿದ ಇಬ್ಬರು ಪರೀಕ್ಷೆ ಬರೆಯಲು ಒಪ್ಪಿಗೆ ಸೂಚಿಸಿದ್ದು, ಅವರಿಗೆ ಎನ್ 95 ಮಾಸ್ಕ್ ನೀಡಿ, ಸೂಕ್ತ ಭದ್ರತೆ ಮೂಲಕ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುವುದು ಎಂದು ಮಚ್ಚಾಡೋ ಮಾಹಿತಿ ನೀಡಿದರು.