ಕೋಲಾರ: ಸಂಸದೆ ಸುಮಲತಾ ಅಂಬರೀಶ್ ಅವರಿಗೆ ರಾಜಕರಾಣದಲ್ಲಿ ಅನುಭವದ ಕೊರತೆ ಇದೆ ಎಂದು ಜೆಡಿಎಸ್ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಎಲ್ಲಿ ಭ್ರಷ್ಟಾಚಾರ ಇರುತ್ತೋ ಅಲ್ಲಿ ಹೆಚ್ಡಿಕೆ ಇರ್ತಾರೆ ಅನ್ನೋ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ಸುಮಲತಾಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ. ಜೆಡಿಎಸ್ ಪಕ್ಷ, ಕುಮಾರಸ್ವಾಮಿ, ದೇವೇಗೌಡರು, ರಾಜ್ಯದ ಸಂಪತ್ತನ್ನು ಉಳಿಸುವ ಕೆಲಸ ಮಾಡಿದ್ದೇವೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸುಮಲತಾ ನಟೋರಿಯಸ್, ಸಂಸದ ಸ್ಥಾನಕ್ಕೆ ಅರ್ಹರಲ್ಲ: ರವೀಂದ್ರ ಶ್ರೀಕಂಠಯ್ಯ
Advertisement
Advertisement
ಪ್ರಜ್ವಲ್ ರೇವಣ್ಣರನ್ನು ಸುಮಲತಾ ಹೊಗಳಿದ ಬಗ್ಗೆ ಮಾತನಾಡಿ, ನನ್ನ ತಮ್ಮನ ಬಗ್ಗೆ ಸುಮಲತಾ ಪೊಲಿಟಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಅದಕ್ಕೆ ಅಭಿನಂದನೆ. ಮಂಡ್ಯದ ಸಂಸದರನ್ನಾಗಿ ಜನ ಆಯ್ಕೆ ಮಾಡಿದ್ದಾರೆ ಜನರ ಋಣ ತೀರಿಸಿಕೊಳ್ಳುವ ಕೆಲಸ ಮಾಡಿ. ಈ ರೀತಿಯ ವೈಯಕ್ತಿಕ ಕೆಸರೆರಚಾಟ ಮಾಡಿಕೊಂಡು ಟೀಕೆ ಮಾಡುವುದು ಬೇಡ ಎಂದರು.
Advertisement
Advertisement
ಎಲ್ಲಿ ಗೆದ್ದಿದ್ದಾರೋ ಅಲ್ಲೇ ಸೋಲಿಸುತ್ತೇನೆ ಎಂಬ ಹೆಚ್ಡಿಕೆ ಹೇಳಿಕೆ ಬಗ್ಗೆ ಮಾತನಾಡಿ, ನಾನು ಮಂಡ್ಯದ ಚುನಾವಣೆಯಲ್ಲಿ ಸೋತಿದ್ದೇನೆ ನಾನು ಸೋಲು ಒಪ್ಪಿಕೊಂಡಿದ್ದೇನೆ. ಆದರೆ ಐದುಮುಕ್ಕಾಲು ಲಕ್ಷ ಜನ ಮತ ಹಾಕಿದ್ದಾರೆ ಬೇಜಾರಿಲ್ಲ. ಸಂಸದರಾಗಿದ್ದಾರೆ ಅದರ ಋಣ ತೀರಿಸುವ ಕೆಲಸ ಮಾಡಲಿ ಎಂದು ನಿಖಿಲ್ ವಾಕ್ಸಮರ ಮುಂದುವರಿಸಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ
ಇದೇ ವೇಳೆ ಮಂಡ್ಯದಲ್ಲಿನ ಬೆಳವಣಿಗೆ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡುತ್ತಾ ಕೆಆರ್ಎಸ್ ಡ್ಯಾಂಗೆ ಕಲ್ಲು ಹೊಡೆಯುವ ಕೆಲಸ ಮಾಡದಂತೆ ಸಂಸದೆ ಸುಮಾಲತಾಗೆ ಸಲಹೆ ನೀಡಿದರು. ಕೆಆರ್ಎಸ್ ಡ್ಯಾಂಗೆ ತನ್ನದೆ ಆದ ಇತಿಹಾಸವಿದೆ. ಮೀಡಿಯಾ ಮುಂದೆ ಫೋಕಸ್ ಗಾಗಿ ಮಂಡ್ಯದ ಜನತೆಯಲ್ಲಿ ಆತಂಕ ಸೃಷ್ಟಿ ಮಾಡಬೇಡಿ. ಕೆ.ಆರ್.ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂಬ ವಿಚಾರವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಡ್ಯಾಂ ಬಿರುಕು ಬಿಟ್ಟಿದ್ದರೆ ಟೆಕ್ನಿಕಲ್ ಟೀಂ ಇದೆ. ಸರ್ಕಾರ ಅದರ ಬಗ್ಗೆ ಉತ್ತರ ಕೊಡ್ತಾರೆ. ಆದರೆ ಈ ರೀತಿ ಗೊಂದಲ ಸೃಷ್ಟಿಮಾಡಬಾರದು ಎಂದು ತಿಳಿ ಹೇಳಿದರು.