ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಹಾಗೂ ಹಿಂದಿ ಭಾಷಾ ಹೇರಿಕೆಗೆ ಕರ್ನಾಟದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ನಟರು ಹಾಗೂ ನಿರ್ದೇಶಕರು ಸೇರಿದಂತೆ ಅನೇಕರು ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ನಟ ನಿರ್ದೇಶಕ ರಿಷಬ್ ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ: ದರ್ಶನ್
Advertisement
ಈಗಾಗಲೇ ನಟಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಧನಂಜಯ್, ಪ್ರಕಾಶ್ ರಾಜ್, ನಟ ಚೇತನ್ ಸೇರಿದಂತೆ ಅನೇಕರು ಹಿಂದಿ ಹೇರಿಕೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಭಟಿಸಿದ್ದಾರೆ. ಇದೀಗ ನಟ ರಿಷಬ್ ಶೆಟ್ಟಿ ಹಿಂದಿ ಭಾಷಾ ಹೇರಿಕೆಯ ಬಗ್ಗೆ ಟ್ವೀಟ್ ಮಾಡುವ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
“ಸುಲಿದಿಟ್ಟ ರಸಬಾಳೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ, ಇನ್ನೊಂದು ಭಾಷೆಯ ಅಗತ್ಯವಾದರೂ ಏನು? ಎಂದು ಪ್ರಶ್ನೆ ಮಾಡಿದ್ದಾರೆ. ನಾವು ಕನಸು ಕಾಣೋ ಭಾಷೆ, ನಮ್ಮ ನಾಲಿಗೆಯಲಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ” ಎಂದು ರಿಷಬ್ ಹೇಳಿದ್ದಾರೆ.
Advertisement
Advertisement
ಕೊನೆಯಲ್ಲಿ #StopHindiImposition ಎಂಬ ಹ್ಯಾಶ್ಟ್ಯಾಗ್ ಹಾಕಿ ಜೈ ಕರ್ನಾಟಕ ಮಾತೆ ಎಂದಿದ್ದಾರೆ. ಈ ಬಗ್ಗೆ ದರ್ಶನ್ ಟ್ವೀಟ್ ಮಾಡಿದ್ದು, “ಬಹಳ ವರ್ಷಗಳಿಂದಲೂ ಈ ಹಿಂದಿ ಹೇರಿಕೆ ಕಾಲ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಗಳ ಬಳಕೆಯಿಂದ ನಮ್ಮ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯುಂಟಾಗುತ್ತಿದೆ. ಇದನ್ನು ಪ್ರತಿಭಟಿಸದೆ ನಾವು ಸುಮ್ಮನಿದ್ದರೆ ಮುಂದೆ ಕನ್ನಡಿಗ ಎನ್ನುವ ಅಸ್ತಿತ್ವವೇ ದೂರವಾಗುವ ದಿನಗಳು ಹತ್ತಿರದಲ್ಲೇ ಇದೆ” ಎಂದು ಬರೆದುಕೊಂಡಿದ್ದಾರೆ.
ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ.
ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ pic.twitter.com/YfnGUaTToL
— Darshan Thoogudeepa (@dasadarshan) September 15, 2020
ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಯೋಗ್ಯವಲ್ಲ. ಅದು ಕೇವಲ ಉತ್ತರ ಭಾರತದ ಕೆಲವು ರಾಜ್ಯಗಳಿಗೆ ಸೀಮಿತವಾಗಿದ್ದರೆ ಒಳಿತು. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವುದು ನಮ್ಮ ಭಾರತ ಸಂವಿಧಾನದ ಪ್ರತೀಕವಾಗಿದೆ. ಯಾವುದೋ ಉತ್ತರದ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯಕರ ಸಂಗತಿಯೆಂದರೆ ತಪ್ಪಾಗಲಾರದು. ನಮ್ಮ ಕೊನೆಯುಸಿರಿರುವವರೆಗೂ ಕನ್ನಡ ಪರವಾಗಿ ನಿಲ್ಲುತ್ತೇವೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ” ಎಂದು ದರ್ಶನ್ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಸುಲಿದಿತ್ತ ರಸಬಾಳೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ, ಇನ್ನೊಂದು ಭಾಷೆಯ ಅಗತ್ಯವಾದರೂ ಏನು? ನಾವು ಕನಸು ಕಾಣೋ ಭಾಷೆ, ನಮ್ಮ ನಾಲಿಗೆಯಲಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ..! #StopHindiImposition ಜೈ ಕರ್ನಾಟಕ ಮಾತೆ pic.twitter.com/5zOR189rvh
— Rishab Shetty (@shetty_rishab) September 15, 2020