ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು.
Advertisement
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಈ ವಯಸ್ಸಿನಲ್ಲೂ ಬಿಎಸ್ವೈ ಉತ್ತಮ ಕೆಲಸ ಮಾಡುತ್ತಿದ್ದಾರೆ, ಬದಲಾವಣೆ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್ ಜೋಶಿ
Advertisement
Advertisement
ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹಳಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಬೆಡ್ ಇಲ್ಲದ ಕಾರಣ ಪ್ರಾಥಮಿಕ ಚಿಕಿತ್ಸೆ ಕೊಡಲು ಮೊಬೈಲ್ ಆಸ್ಪತ್ರೆಗಳನ್ನ ಆರಂಭಿಸಲಾಗಿದೆ. ಬೆಂಗಳೂರು, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆ ಈ ರೀತಿಯ ಬಸ್ಸುಗಳ ಸಂಚಾರ ಮಾಡಲಿವೆ. ಸದ್ಯ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಮೂರನೇ ಅಲೆಗೆ ಸಜ್ಜಾಗುವ ದೂರ ದೃಷ್ಟಿಯಿಂದ ಸಾರಿಗೆ ಇಲಾಖೆಯಿಂದ ಇಂಥ ಬಸ್ಸುಗಳನ್ನ ಚಿಕಿತ್ಸೆಗಾಗಿ ಸಂಚಾರಿ ಆಸ್ಪತ್ರೆಗಳನ್ನ ನಿರ್ಮಾಣ ಮಾಡಲಾಗಿದೆ ಎಂದರು. ಇದನ್ನೂ ಓದಿ: ಎಲ್ಲಿಯವರೆಗೆ ಹೈಕಮಾಂಡ್ಗೆ ವಿಶ್ವಾಸ ಇರುತ್ತೋ ಅಲ್ಲಿವರೆಗೂ ನಾನು ಸಿಎಂ ಆಗಿರುತ್ತೇನೆ – ಬಿಎಸ್ವೈ
Advertisement
ಈ ಸಂದರ್ಭದಲ್ಲಿ ತಹಶೀಲ್ದಾರ ದುಂಡಪ್ಪ ಕೋಮಾರ, ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಬಂಗಾರಪ್ಪನವರ, ಉಪ ತಹಶೀಲ್ದಾರ ಮಹಾದೇವ ಬಿರಾದಾರ, ಡಾ.ಬಸನಗೌಡ ಕಾಗೆ, ಡಾ. ಸಿ ಎಸ್ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.