ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ಭಕ್ತರ ಪ್ರವೇಶ ನಿಷೇಧ ಹಾಗೂ ಕೆಲವೊಂದು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಸೆಪ್ಟೆಂಬರ್ 1 ರಿಂದ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ.
ಈ ಮೂಲಕ ಭಕ್ತರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್ ದೊರೆತಿದ್ದು, ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಾಮೂಲಿ ಪೂಜೆ ನಡೆಯಲಿದೆ. ಅದು ಕೂಡ ಕೊರೊನಾ ಮಾರ್ಗಸೂಚಿ ಅನ್ವಯವೇ ಎಲ್ಲಾ ಸೇವೆಗಳು ಲಭ್ಯವಾಗಲಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
Advertisement
ಹೀಗಾಗಿ ಸೆಪ್ಟೆಂಬರ್ 1ರಿಂದಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈಗಿದ್ದ ಸೀಮಿತ ಸೇವೆಗಳ ಜೊತೆಗೆ ಹೆಚ್ಚುವರಿ ಸೇವೆಗಳ ಆರಂಭ ಮಾಡುವ ಸಾಧ್ಯತೆಯೂ ಇದೆ. ಕ್ಷೀರಾಭಿಷೇಕ, ಕುಂಕುಮಾರ್ಚನೆ, ತುಲಾಭಾರ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಉರುಳು ಸೇವೆ ಹಾಗೂ ಮುಡಿ ಸೇವೆ ಆರಂಭಕ್ಕೆ ಚಿಂತನೆ ಮಾಡಲಾಗಿದೆ. ಈ ವಿಚಾರವನ್ನು ಮುಜರಾಯಿ ಇಲಾಖೆ ಈಗಾಗಲೇ ಸರ್ಕಾರದ ಮುಂದೆ ಪ್ರಸ್ತಾಪ ಮಾಡಿದೆ. ಸರ್ಕಾರ ಒಪ್ಪಿದ್ರೆ ಸದ್ಯದಲ್ಲೇ ದೇವಸ್ಥಾನಗಳಲ್ಲಿ ಎಲ್ಲಾ ಸೇವೆಗೆ ಅವಕಾಶ ನೀಡಲಾಗುವುದು. ಇದನ್ನೂ ಓದಿ: ಕೋವಿಡ್ನಿಂದ ದೇವಾಲಯದ ಆದಾಯಕ್ಕೆ ಭಾರೀ ಹೊಡೆತ- ಕಳೆದ ವರ್ಷ ಎಷ್ಟು? ಈ ವರ್ಷ ಎಷ್ಟು ಬಂದಿದೆ?
Advertisement
Advertisement
ಒಟ್ಟಿನಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಸೇವೆಗಳು ಸ್ಥಗಿತಗೊಂಡಿದ್ದವು. ಅಲ್ಲದೆ ಕೇವಲ ಸೀಮಿತ ಸೇವಗಳಿಗೆ ಮಾತ್ರ ಅವಕಾಶ ಕೊಡಲಾಗಿತ್ತು. ಅನ್ ಲಾಕ್ ಪ್ರಕ್ರಿಯೆ ಜಾರಿ ಆಗುತ್ತಿರುವುದರಿಂದ ಎಲ್ಲಾ ಸೇವೆಗಳಿಗೆ ಅವಕಾಶ ನೀಡಲು ಸಿದ್ಧತೆ ನಡೆಸಲಾಗಿದೆ.