ಬೆಂಗಳೂರು: ಶಾಸಕಿ ಸೌಮ್ಯಾ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಮುಂಜಾಗ್ರತೆಯ ದೃಷ್ಟಿಯಿಂದ ನಾನು ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸೌಮ್ಯಾ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಶುಕ್ರವಾರ ಒಂದೇ ದಿನ ರಾಜ್ಯದಲ್ಲಿ 2,566 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,490 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 3 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 174 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 55, ಕಲಬುರಗಿ 17, ಬೀದರ್, ಮಂಡ್ಯ ಹಾಗೂ ತುಮಕೂರಿನಲ್ಲಿ ತಲಾ 12 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ಕಳೆದ 24 ಗಂಟೆಯಲ್ಲಿ 62,258 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 291 ಜನರು ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 4,52,647 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 1,19,08,910 ಏರಿಕೆಯಾಗಿದೆ.