ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಈ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹೇಯ್ಸ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್, ಕ್ಯಾಪಿಟಲ್ ಹೋಟೆಲ್-ರಾಜಭವನ ಜಂಕ್ಷನ್ ಮತ್ತು ಪ್ಲಾನೆಟೇರಿಯಂ ರಸ್ತೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.
Advertisement
ಮುಖ್ಯಮಂತ್ರಿ @BSYBJP ರವರು ಇಂದು ಬೆಂಗಳೂರು ನಗರದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. (1/2)#SmartCityBengaluru #BengaluruMission2022 pic.twitter.com/lYIqZkHYsr
— CM of Karnataka (@CMofKarnataka) January 30, 2021
Advertisement
ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರಿನಲ್ಲಿ 37 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಅದರಲ್ಲಿ ರಸ್ತೆ ಅಭಿವೃದ್ಧಿ, ಕೋವಿಡ್ ಆಸ್ಪತ್ರೆಗಳಿಗೆ ನೆರವು, ಐಟಿ-ಯೋಜನೆಗಳು, ಕಟ್ಟಡ ನಿರ್ಮಾಣ ಮತ್ತು ಇತರ ಕಾಮಗಾರಿಗಳು ಸೇರಿವೆ. ಇದರ ಅಂದಾಜು ವೆಚ್ಚ 930 ಕೋಟಿ ರೂ.ಗಳು. ಈವರೆಗೆ 4 ಕಾಮಗಾರಿಗಳು ಪೂರ್ಣಗೊಂಡಿವೆ. 29 ಕಾಮಗಾರಿಗಳು ಪ್ರಗತಿಯಲ್ಲಿವೆ. 4 ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ವರೆಗೆ 103 ಕೋಟಿ ರೂ. ವೆಚ್ಚವಾಗಿದೆ.
Advertisement
ಉಪಮುಖ್ಯಮಂತ್ರಿ @drashwathcn, ಸಚಿವರಾದ @RAshokaBJP, @BABasavaraja, @gopalaiahbjp, ಸಂಸದ @PCMohanMP, ಬಿಡಿಎ ಅಧ್ಯಕ್ಷ @SRVishwanathBJP ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಜೊತೆಗಿದ್ದರು. (2/2) pic.twitter.com/0uTE3C9BFH
— CM of Karnataka (@CMofKarnataka) January 30, 2021
ಈ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿಯನ್ನು ಖಾತರಿಪಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.