ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ಇರುವುದನ್ನು ನಾವು ನೋಡಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್ ಅವರು ಇಂದು 57ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಪತಿ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ ಅವರು ಬಳಿಕ ಮಂಡ್ಯಗೆ ತೆರಳಿದರು.
Advertisement
Advertisement
ಈ ವೇಳೆ ಮಾಧ್ಯಮಗಳು ಸ್ಯಾಂಡಲ್ವುಡ್ ಡ್ರಗ್ ಮಾಫಿಯಾದ ಬಗ್ಗೆ ಕೇಳಲಾದ ಪ್ರಶ್ನೆಗೆ, ಸ್ಯಾಂಡಲ್ವುಡ್, ಬಾಲಿವುಡ್ ಅಂತಾ ಬೇರೆ ಇಲ್ಲ. ಎಲ್ಲ ಸಿನಿಮಾರಂಗವೂ ಒಂದೇ. ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ಇರುವುದನ್ನು ನಾವು ನೋಡಿಲ್ಲ. ಆದರೆ ಇತ್ತೀಚೆಗೆ ಯುವಕರು ಹೆಚ್ಚಾಗಿ ಡ್ರಗ್ ಮಾಫಿಯಾಗೆ ಬಲಿಯಾಗುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಲ್ಜಿಯಂ ಟು ಬೆಂಗಳೂರು – ಸ್ಯಾಂಡಲ್ವುಡ್ ಡ್ರಗ್ಸ್ ಕಹಾನಿ
Advertisement
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಾತನಾಡಿ, ನನಗೆ ಗೊತ್ತಿರುವ ಹಾಗೆ ಸ್ಯಾಂಡಲ್ವುಡ್ ನಲ್ಲಿ ಅಂತಹವರು ಯಾರು ಇಲ್ಲ. ಬೆಳಗಾದರೆ ಡ್ರಗ್ ಬೇಕು ಎನ್ನುವವರು ನಮ್ಮಲ್ಲಿ ಯಾರು ಇಲ್ಲ. ಬೇರೆ ಚಿತ್ರರಂಗದ ಬಗ್ಗೆ ಸುದ್ದಿ ಆಗಿದೆ ಎಂದು ತಿಳಿಸಿದರು.