ಮಡಿಕೇರಿ: ಸ್ವಚ್ಛ ಭಾರತ್ ಅಭಿಯಾನದ ಜಾಗೃತಿಗಾಗಿ ಮಡಿಕೇರಿಯಲ್ಲಿ ಸೈಕಲ್ ಜಾಥಾವನ್ನು ಆಯೋಜಿಸಲಾಗಿತ್ತು.
Advertisement
ಮಡಿಕೇರಿ ನಗರಸಭೆ, ಗ್ರೀನ್ ಸಿಟಿ ಫೋರಂ ಮತ್ತು ಕೃಷಿ ತಂತ್ರ ಸಂಯುಕ್ತ ಆಶ್ರಯದಲ್ಲಿ ಇಂದು ಮುಂಜಾನೆ ಮಡಿಕೇರಿಯ ಸುದರ್ಶನ ವೃತ್ತದಲ್ಲಿ ಸೈಕಲ್ ಜಾಥಾಗೆ ಚಾಲನೆ ನೀಡಲಾಯಿತು. ಪುಟ್ಟ ಮಕ್ಕಳಿಂದ ಹಿಡಿದು ಹಿರಿಯರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಸೈಕಲ್ ರೈಡ್ ನಲ್ಲಿ ಭಾಗವಹಿಸಿದ್ದರು.
Advertisement
Advertisement
ಸುದರ್ಶನ್ ಸರ್ಕಲ್ನಿಂದ ಹೊರಟ ಸೈಕಲ್ ಜಾಥಾ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಅಜ್ಜಮಾಡ ದೇವಯ್ಯ ವೃತ್ತ, ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ ಮಾರ್ಗದಲ್ಲಿ ಸಾಗಿ ಇಂದಿರಾ ಕ್ಯಾಂಟೀನ್ ಮೂಲಕ ನಗರದ ರಾಜಾಸೀಟಿನಲ್ಲಿ ಕೊನೆಗೊಂಡಿತು. ಸ್ವಚ್ಛ ಸರ್ವೇಕ್ಷಣೆ 2021ರ ಅಂಗವಾಗಿ ನಗರವನ್ನ ಸ್ವಚ್ಛವಾಗಿಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
Advertisement
ಕೊಡಗಿಗೆ ಆಗಮಿಸುವ ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಸ್ವಚ್ಛತೆಯ ಬಗ್ಗೆ ಅರಿವು ನೀಡುವುದು ಮತ್ತು ಪ್ಲಾಸ್ಟಿಕ್ನಿಂದ ಪ್ರಕೃತಿಯ ಮೇಲೆ ಆಗುವ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಜಾಥಾದ ಪ್ರಮುಖ ಉದ್ದೇಶವಾಗಿದೆ.