ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸುತ್ತಮುತ್ತಲು ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಸತತ ಐದು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ತಿಳಿಸಿದ್ದಾರೆ.
ಇಂದಿನಿಂದ ಆಗಸ್ಟ್ 7ರವರೆಗೆ ಸತತ ಐದು ದಿನಗಳ ಕಾಲ ವಿಶ್ವವಿದ್ಯಾಲಯಕ್ಕೆ ರಜೆ ಘೋಷಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾ ಅವಧಿ ದಿನಗಳಲ್ಲಿ ಆಯಾ ಅಧ್ಯಯನ, ಆಡಳಿತ ವಿಭಾಗದ ಮುಖ್ಯಸ್ಥರು, ನಿರ್ದೇಶಕರು, ಸಂಯೋಜನಾಧಿಕಾರಿ, ನಿಲಯ ಪಾಲಕರು, ಆಸ್ಪತ್ರೆಯ ವೈದ್ಯರು, ಅಧಿಕಾರಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ದೂರವಾಣಿ ಮತ್ತು ಇ-ಮೇಲ್‍ಗಳ ಮೂಲಕ ಸಂಪರ್ಕಿಸಬೇಕು ಎಂದು ತಿಳಿಸಿದರು.
Advertisement
Advertisement
ಅಲ್ಲದೇ ಕೇಂದ್ರಸ್ಥಾನವನ್ನು ಬಿಡುವಂತಿಲ್ಲ. ಅಗತ್ಯವಿದ್ದಾಗ ವಿವಿ ಕಡ್ಡಾಯವಾಗಿ ಹಾಜರ್ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಧ್ಯಯನ ಮತ್ತು ಆಡಳಿತ ಸಿಬ್ಬಂದಿ ಮನೆಯಿಂದಲೇ ಕಾರ್ಯವನ್ನು ನಿರ್ವಹಿಸಬೇಕು. ಅಧ್ಯಯನ ಮತ್ತು ಆಡಳಿತ ಸಿಬ್ಬಂದಿಯ ಕರ್ತವ್ಯ ನಿರತ ರಜೆಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.