LatestMain PostNational

ಹಪ್ಪಳ ಪ್ಯಾಕೇಟ್ ಬಿಡುಗಡೆ ಮಾಡಿ ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ

ನವದೆಹಲಿ: ಕೊರೊನಾ ವೈರಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಗಲು ರಾತ್ರಿ ಹೋರಾಟ ನಡೆಸುತ್ತಿದ್ದರೆ, ಇತ್ತ ಅವರದ್ದೇ ಸಂಪುಟದ ಸಚಿವ ಅರ್ಜುನ್ ರಾಮ್ ಮೇಘವಾಲ್ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಕೆಲಸ ಮಾಡಿದ್ದಾರೆ.

ಕೊರೊನಾ ಬಿಕ್ಕಿಟ್ಟಿನ ವೇಳೆ ಹಪ್ಪಳದ ಪ್ಯಾಕೇಟ್ ಬ್ರ್ಯಾಂಡ್‍ವೊಂದನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಈ ಹಪ್ಪಳ ಕೊರೊನಾ ವಿರುದ್ಧ ದೇಹದಲ್ಲಿ ಪ್ರತಿಕಾಯಗಳನ್ನು ಉತ್ಪಾದಿಸಲಿದೆ ಎಂದು ಸಂಸದೀಯ ಸಹಾಯಕ ಖಾತೆ ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.

‘ಭಾಭಿ ಜಿ ಪಪಾಡ್’ ಹೆಸರಿನ ಹಪ್ಪಳ ಆತ್ಮ ನಿರ್ಭರ್ ಭಾರತ್ ಅಡಿಯಲ್ಲಿ ಉತ್ಪಾದನೆ ಮಾಡಲಾಗಿದೆ. ಇದು ಕೊರೊನಾ ವಿರುದ್ಧ ಹೋರಾಡಲು ಸಹಕಾರಿಯಾಗಲಿದೆ ಎಂದು ವಿಡಿಯೋ ಒಂದರಲ್ಲಿ ಹೇಳಿದ್ದಾರೆ. ಈ ಹಪ್ಪಳ ಬಿಡುಗಡೆಯ ವಿಡಿಯೋ ವೈರಲ್ ಆಗಿದ್ದು ಸಚಿವರ ವಿರುದ್ಧ ಟೀಕೆಗಳು ಕೇಳಿ ಬಂದಿದೆ.

Leave a Reply

Your email address will not be published. Required fields are marked *

Back to top button