InternationalLatestMain PostSports

ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾಗೆ ಹರಿಯಾಣ ಸರ್ಕಾರ 6 ಕೋಟಿ ರೂ. ಹಾಗೂ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಬ್ರ್ಯಾಂಡ್ ನ್ಯೂ ಎಕ್ಸ್ ಯುವಿ 700 ಕಾರ್ ನ್ನು ಉಡುಗೊರೆಯಾಗಿ ನೀಡುವುದಾಗಿ ಘೊಷಿಸಿದ್ದಾರೆ.

ನೀರಜ್ ಚೋಪ್ರಾ ಶನಿವಾರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಎರಡನೇ ಎಸೆತದಲ್ಲೇ 87.58 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಈ ಮೂಲಕ ಅಥ್ಲೆಟಿಕ್ ಲೋಕ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಅಲ್ಲದೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಹೀಗಾಗಿ ಸರ್ಕಾರಗಳು ಸೇರಿದಂತೆ ಹಲವರು ಅವರಿಗೆ ಉಡುಗೊರೆಗಳನ್ನು ಘೊಷಿಸುತ್ತಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು 6 ಕೋಟಿ ರೂ.ಗಳ ನಗದು ಬಹುಮಾನವನ್ನು ಘೊಷಿಸಿದ್ದಾರೆ. ಇದರ ಬೆನ್ನಲ್ಲೇ ಆನಂದ್ ಮಹೀದ್ರಾ ಸಹ ಟ್ವೀಟ್ ಮಾಡುವ ಮೂಲಕ ನೀರಜ್‍ಗೆ ಹೊಸ ಎಸ್‍ಯುವಿ ಕಾರ್ ಗಿಫ್ಟ್ ಕೊಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಶತಕೋಟಿ ಭಾರತೀಯರ ಕನಸು ನನಸು – ಚಿನ್ನ ಗೆದ್ದ ನೀರಜ್

ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಉನ್ನತ ಮಟ್ಟದ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Back to top button