ಹಾವೇರಿ: ಲಾಕ್ಡೌನ್ ಸಡಿಲಿಕೆಯಾದ ಹಿನ್ನೆಲೆ ಹಾವೇರಿಯಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಪ್ರಯಾಣಿಕರು ನಿರ್ಲಕ್ಷ್ಯ ತೋರುತ್ತಿದ್ದಾರೆ.
ಬೆಳಗ್ಗೆ ಏಳೂವರೆಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ನಸುಕಿನಿಂದಲೇ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದು, ಬೇರೆ ಜಿಲ್ಲೆಗಳ ಊರುಗಳಿಗೆ ತೆರಳಲು ನೂರಾರು ಜನ ಬಸ್ ನಿಲ್ದಾಣದಲ್ಲಿ ಜಮಾಯಿಸಿ, ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಅಲ್ಲದೆ ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು ಗುಂಪಾಗಿ ಹತ್ತಿದ್ದಾರೆ.
Advertisement
Advertisement
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವುದನ್ನೂ ಅಧಿಕಾರಿಗಳು ಮರೆತಿದ್ದು, ಹಾಗೆಯೇ ಬಸ್ ಹತ್ತಿಸಿಕೊಳ್ಳುವ ಮೂಲಕ ಸಾರಿಗೆ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಬೆಳಗ್ಗೆ ಪ್ರಯಾಣಿಕರು ಬಸ್ ಹತ್ತುವ ವೇಳೆ ಥರ್ಮಲ್ ಸ್ಕ್ರೀನಿಂಗ್ ಮಾಡಿಲ್ಲ. ಪ್ರಯಾಣಿಕರು ಗುಂಪು ಗುಂಪಾಗಿ ನಿಂತು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಬಸ್ ಬರುತ್ತಿದ್ದಂತೆ ಓಡೋಡಿ ಬಸ್ ಹತ್ತಿದ್ದಾರೆ. ಈ ವೇಳೆ ಸಹ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ.