ಹಾಸನ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತ ಮಹಿಳೆ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ನಗರದ ಹೊರವಲಯದ 48 ವರ್ಷದ ಮಹಿಳೆ ಕರೊನಾ ಸೋಂಕಿನಿಂದ ಅಸುನೀಗಿದ್ದಾರೆ. ರಕ್ತದೊತ್ತಡ, ಮಧುಮೇಹ ಹಾಗೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಮಹಿಳೆ, ಜುಲೈ 7 ರಂದು ಕೊರೊನಾ ಅಸ್ಪತ್ರೆಗೆ ದಾಖಲಾಗಿದ್ದರು. ಜುಲೈ 8 ರಂದು ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ತಿಳಿಸಿದ್ದಾರೆ.
Advertisement
Advertisement
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 568 ಕೊರೊನಾ ಪ್ರಕರಣ ಪತ್ತೆಯಾಗಿದ್ದು, 276 ಜನ ಡಿಸ್ಚಾರ್ಜ್ ಆಗಿದ್ದಾರೆ, 281 ಸಕ್ರಿಯ ಪ್ರಕರಣಗಳಿವೆ.