ಬೆಂಗಳೂರು: ನನ್ನ ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ಹೇಳಿದ್ದಾರೆ.
ಕೊಡವರೂ ಬೀಫ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ. ವಿಶೇಷವಾದ ಗೌರವವೂ ಇದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಕೊಡವರೂ ಬೀಪ್ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ.
ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ.
ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ
ಗೌರವವೂ ಇದೆ.
— Siddaramaiah (@siddaramaiah) December 19, 2020
Advertisement
ಸಿದ್ದರಾಮಯ್ಯ ಹೇಳಿದ್ದು ಏನು?
ತಮ್ಮ ಮೈಸೂರಿನ ಭಾಷಣದಲ್ಲಿ ಬಿಜೆಪಿ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡುತ್ತಾ, ಸಿದ್ದರಾಮಯ್ಯ ಗೋಹತ್ಯೆ ಪರವಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಬೀಫ್ ಅನ್ನು ಮುಸ್ಲಿಮರು ಮಾತ್ರ ತಿನ್ನುತ್ತಾರಾ? ಕ್ರೈಸ್ತರು ತಿನ್ನುತ್ತಾರೆ, ದಲಿತರು ತಿನ್ನುತ್ತಾರೆ. ಕೊಡವರು ತಿನ್ನುತ್ತಾರೆ. ಬೇರೆ ಬೇರೆ ಕಡೆ ತಿನ್ನುತ್ತಾರೆ. ಹಿಂದುಳಿದವರು ತಿನ್ನುತ್ತಾರೆ. ನನಗೆ ತಿನ್ನಬೇಕು ಅಂತ ಅನಿಸಿದ್ರೆ ನಾನು ಯಾವುದು ಬೇಕಾದರೂ ತಿನ್ನುತ್ತೇನೆ. ಅದನ್ನು ಪ್ರಶ್ನೆ ಮಾಡಲು ನೀನು ಯಾರು ಅಂತ ನಾನು ಈ ಹಿಂದೆ ಸದನದಲ್ಲಿ ಪ್ರಶ್ನೆ ಮಾಡಿದ್ದೆ. ನನಗೆ ಯಾವುದು ಇಷ್ಟ ಆಗುತ್ತದೋ ಅದನ್ನು ತಿನ್ನುತ್ತೇನೆ ಎಂದು ಹೇಳಿದ್ದರು.
Advertisement
ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ. 2/2#ಪತ್ರಿಕಾಹೇಳಿಕೆ
— Siddaramaiah (@siddaramaiah) December 19, 2020
Advertisement
ಅರ್ಥ ಕಲ್ಪಿಸಬೇಡಿ:
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ ಎಂದು ಟ್ವೀಟ್ ಮಾಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. 1/2#ಪತ್ರಿಕಾಹೇಳಿಕೆ
— Siddaramaiah (@siddaramaiah) December 19, 2020