ವಿಜಯಪುರ: ಆಕಸ್ಮಿಕವಾಗಿ ಕಾರಿಗೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ವಿಜಯಪುರದ ತಿಡಗುಂದಿ ಗ್ರಾಮದ ಬಳಿ ನಡೆದಿದೆ. ತಡರಾತ್ರಿ ಈ ಅವಘಡ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಅನಾಹುತದಿಂದ ಪಾರಾಗಿದ್ದಾರೆ.
- Advertisement 2-
ವಿಜಯಪುರದಿಂದ ಸೊಲ್ಲಾಪುರ ಹೋಗುವ ವೇಳೆ ತಿಡಗುಂದಿ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ಈ ಕಾರು ಆಲಮೇಲ ಪಟ್ಟಣ ಪಂಚಾಯತಿ ಸದಸ್ಯ ಸಾಧೀಕ್ ಎಂಬವರಿಗೆ ಸೇರಿದ್ದಾಗಿದೆ.
- Advertisement 3-
ಕಾರಿನಲ್ಲಿದ್ದ 85 ಸಾವಿರ ನಗದು ಹಾಗೂ ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿದೆ. ಮಹೀಂದ್ರಾ ಕಂಪನಿಯ ಎಕ್ಸ್ಯುವಿ500 ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.