ರಾಮನಗರ: ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲುತ್ತೇನೆ. ಅಂಬರೀಶ್ ಮುಂದೆ ಕೈ ಕಟ್ಟಿ ನಿಂತ್ರೆ ಅವರಿಗೆ ನಾನೇನು ಗುಲಾಮನಾಗಿದ್ನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ವೈರಲ್ ವಿಚಾರ ಸಂಬಂಧ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ ಅವಶ್ಯಕತೆ ಇಲ್ಲ. ನಾನು ಕಳೆದ ಎರಡು ದಿನದ ಹಿಂದೆ ಹೇಳಿದ್ದ ಹೇಳಿಕೆಗೆ ಸ್ಕೋಪ್ ಕೊಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಅನೇಕ ಸಮಸ್ಯೆಗಳಿಗೆ ಅದರ ಬಗ್ಗೆ ಮಾಧ್ಯಮದವರು ಗಮನಹರಿಸಬೇಕು ಎಂದರು.
ಭ್ರಷ್ಟಾಚಾರದ ವಿಷಯದಲ್ಲಿ ಕುಮಾರಸ್ವಾಮಿ ಅಂಬಾಸಿಡರ್ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಹೌದು ನಾನು ಭ್ರಷ್ಟಾಚಾರದಲ್ಲಿ ಅಂಬಾಸಿಡರ್. ಅನೇಕ ವರ್ಷಗಳಿಂದ ನಾನು ನಮ್ಮ ಕುಟುಂಬ ಭ್ರಷ್ಟಾಚಾರದ ವಿಷಯದಲ್ಲಿ ಹೋರಾಟ ಮಾಡ್ತಿದ್ದೇವೆ. ಭ್ರಷ್ಟ ಅಧಿಕಾರಿಗಳು, ಭ್ರಷ್ಟಾಚಾರದ ವಿರುದ್ಧ ದಾಖಲೆ ಸಮೇತ ಹೋರಾಟ ಮಾಡಿದ್ದೇವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸುಮಲತಾರಿಗೆ ರಾಜಕಾರಣದಲ್ಲಿ ಅನುಭವದ ಕೊರತೆ ಇದೆ: ನಿಖಿಲ್
ಇದೇ ವೇಳೆ ಸುಮಲತಾ ಬಗ್ಗೆ ಗೌರವ ತೋರಿ ಮಾತನಾಡಿದ ಕುಮಾರಸ್ವಾಮಿ, ಆ ಹೆಣ್ಣು ಮಗಳ ಬಗ್ಗೆ ಇದೀಗ ಚರ್ಚೆ ಬೇಡ. ಮುಂದಿನ ಚುನಾವಣೆ ಸಂಧರ್ಭದಲ್ಲಿ ನಾನು ಮಾತಾಡ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಅಂಬರೀಶ್ ಪಾರ್ಥಿವ ಶವ ತಂದಿದ್ದೇ ಹೆಚ್‍ಡಿಕೆ, ಆ ಫೋಟೋವನ್ನೂ ವೈರಲ್ ಮಾಡ್ಲಿ: ಕೆಟಿಎಸ್ ಆಗ್ರಹ