– ಅಮಾವಾಸ್ಯೆ, ಹುಣ್ಣಿಮೆಗೆ ಬರುವ ಸಂಸದೆ ಸುಮಲತಾ
ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಬಂದಿದ್ದೇ ಕುಮಾರಸ್ವಾಮಿ. ಆ ಫೋಟೋಗಳನ್ನು ಕೂಡ ವೈರಲ್ ಮಾಡಲಿ ಎಂದು ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಆಗ್ರಹಿಸಿದ್ದಾರೆ.
ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿನಿಂತಿರುವ ಫೋಟೋ ವೈರಲ್ ವಿಚಾರ ಜೆಡಿಎಸ್ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಎಂಎಲ್‍ಸಿ, ಎಲ್ಲಾ ಫೋಟೋಗಳನ್ನು ವೈರಲ್ ಮಾಡುವಂತೆ ಒತ್ತಾಯಿಸಿದ್ದಾರೆ. ಅಂಬರೀಶ್ ಒಳ್ಳೆಯ ನಟ, ಅವರಿಗೆ ಎಲ್ಲರೂ ಗೌರವ ಕೊಡುತ್ತೇವೆ. ಕುಮಾರಸ್ವಾಮಿ ಅವರು ಸಹ ಗೌರವ ಕೊಡುತ್ತಿದ್ದರು. ಅದನ್ನು ಹೀಗೆ ಫೋಟೋ ವೈರಲ್ ಮಾಡೋದು ಸರಿಯಲ್ಲ ಎಮದು ಕಿಡಿಕಾರಿದರು.
ಅಂಬರೀಶ್‍ಗೆ ಜೆಡಿಎಸ್ ರಾಜಕೀಯ ಮರುಜೀವ ಕೊಟ್ಟಿದೆ. ಅವರನ್ನು ಸಂಸದರನ್ನಾಗಿ ಮಾಡಿದ ಫೋಟೋವನ್ನು ಕೂಡ ವೈರಲ್ ಮಾಡಲಿ. ಆ ದಿನಗಳಲ್ಲಿ ಕುಮಾರಸ್ವಾಮಿ ಅವರನ್ನು ಹೇಗೆ ನೋಡುತ್ತಿದ್ದರು ಅನ್ನೋದನ್ನು ವೈರಲ್ ಮಾಡಲಿ. ಅಂಬರೀಶ್ ಅವರ ಪಾರ್ಥಿವ ಶರೀರವನ್ನು ತಂದಿದ್ದೆ ಕುಮಾರಸ್ವಾಮಿ, ಆಗ ಸುಮಲತಾ ಬೇಡಾ ಅಂತ ಹೇಳಿದ್ರು. ಈ ಫೋಟೋವನ್ನು ಸಹ ವೈರಲ್ ಮಾಡಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ V/S ಕುಮಾರಸ್ವಾಮಿ – ಹೆಚ್‍ಡಿಕೆ ಪರ ಪ್ರತಾಪ್ ಸಿಂಹ ಬ್ಯಾಟಿಂಗ್
ಅಮಾವಾಸ್ಯೆ-ಹುಣ್ಣಿಮೆಗೆ ಬರುವ ಸಂಸದೆ ಸುಮಲತಾ. ಕೊರೋನಾ ಕಾಲದಲ್ಲೂ ಸಂಸದೆ ಕೆಲಸ ಮಾಡಲ್ಲ. ನಾಲ್ಕು ತಿಂಗಳಲ್ಲಿ ಬಂದಿದ್ದೆ ನಾಲ್ಕು ದಿನ. ಈ ನಾಲ್ಕು ದಿನದಲ್ಲಿ ಇದ್ದಿದ್ದೇ ಒಂದೊಂದು ಗಂಟೆ. ಚುನಾವಣೆಯಲ್ಲಿ ಮಂಡ್ಯದಲ್ಲೇ ಇರ್ತೀನಿ ಅಂತಾ ಹೇಳಿದ್ರು. ಗೆದ್ದಾಗಿನಿಂದ ಇಲ್ಲಿಯವರೆಗೆ ಎಷ್ಟು ದಿನ ಉಳಿದುಕೊಂಡಿದ್ದಾರೆ. ಒಂದು ರಾತ್ರಿ-ಬೆಳಗ್ಗೆಯೂ ಇಲ್ಲಿಯೂ ಮಂಡ್ಯದಲ್ಲಿ ಇಲ್ಲ ಎಂದು ಕೆಟಿಎಸ್ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಂಬರೀಶ್ ಮುಂದೆ ಹೆಚ್‍ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್
ಫೋಟೋ ವೈರಲ್:
ನಟ ಅಂಬರೀಶ್ ಮುಂದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸಂಸದೆ ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ವಿವಿಧ ಬರಹಗಳಡಿ ಈ ಫೋಟೋ ಶೇರ್ ಮಾಡಲಾಗಿದೆ. ಇದನ್ನೂ ಓದಿ: ನಾನು ಕ್ಷಮೆ ಕೇಳೋದಿಲ್ಲ ಸುಮಲತಾ ಕುತಂತ್ರಿ: ಎಚ್‍ಡಿಕೆ
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ ಸೇರಿಕೊಂಡಿದ್ದಾರೆ. ನಿಮ್ಮ ಮಾತುಗಳಿಂದಲೇ ಅವರೆಲ್ಲ ನಿಮ್ಮ ಪಕ್ಷ ತೊರೆದಿರೋದು. ನೀವು ತಯಾರು ಮಾಡಿರುವ ಸಾವಿರಾರರು ಜನ, ಅದಕ್ಕಿಂತ ದೊಡ್ಡವರು ಅಂಬರೀಶ್ ಅವರ ಮುಂದೆ ಕೈ ಕಟ್ಟಿ ನಮ್ಮ ಮನೆಯಲ್ಲಿ ನಿಂತಿರೋದನ್ನು ಹಲವು ವರ್ಷ ನೋಡಿದ್ದೇನೆ ಎಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಫೋಟೋ ವೈರಲ್ ಮಾಡುವ ಮೂಲಕ ಸುಮಲತಾ ಬೆಂಬಲಿಗರು ದಳಪತಿಗಳಿಗೆ ಟಕ್ಕರ್ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ಸುಮಲತಾ ಅಭಿಮಾನಿಗಳಿಗೆ ಹೆಚ್‍ಡಿಕೆ ಅಭಿಮಾನಿಗಳ ತಿರುಗೇಟು