ಹಾವೇರಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅರ್ಭಟ ಮುಂದುವರಿದಿದೆ. ಅದರೆ ಕೊರೊನಾ ಸೋಂಕಿತನನ್ನ ಆಸ್ಪತ್ರೆಗೆ ಕರೆದುಕೊಂಡು ಬರಲು ಹೋಗಿದ್ದ ವೇಳೆ ಮನೆಯಿಂದ ಎಸ್ಕೇಪ್ ಆಗಿದ್ದಾನೆ.
ಹಾವೇರಿ ತಾಲೂಕಿನ ಕಬ್ಬೂರು ತಾಂಡಾದ ಸೋಂಕಿತ ಮನೆಯಿಂದ ಕಾಲ್ಕಿತ್ತಿದ್ದಾನೆ. ಇವತ್ತ ಪಾಸಿಟಿವ್ ವರದಿ ಬಂದ ಹಿನ್ನೆಲೆ ಸೋಂಕಿತನನ್ನ ಕರೆದೊಯ್ಯಲು ಅಂಬುಲೆನ್ಸ್ ತಾಂಡಾಗೆ ಬಂದಿತ್ತು. ಅಂಬುಲೆನ್ಸ್ ಬರುತ್ತಲೇ ಕಬ್ಬಿನ ಗದ್ದೆಯಲ್ಲಿ ಓಡಿ ಹೋಗಿದ್ದಾನೆ. ಸೋಂಕಿತನಿಗಾಗಿ ಅಂಬ್ಯುಲೆನ್ಸ್ ಸಿಬ್ಬಂದಿ ತೌಫಿಕ್ ಪಠಾಣ್ ಮತ್ತು ಶಂಕರ್ ಲಮಾಣಿ ಹಾಗೂ ಗ್ರಾಮಸ್ಥರಿಂದ ಹುಡುಕಾಟ ನಡೆಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಹುಡುಕಾಟ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸೋಂಕಿತ ಮನೆಯಿಂದ ಪರಾರಿಯಾಗಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ