ಅಕ್ಕ ಬೆಳಗ್ಗಿನ ಯೋಗ, ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ – ಟ್ರೋಲ್‍ಗೊಳಗಾದ ಶಿಲ್ಪಾ ತಂಗಿ

Public TV
2 Min Read
shetty

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅಶ್ಲೀಲ ಚಿತ್ರೀಕರಣ ದಂಧೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಶಿಲ್ಪಾ ಶೆಟ್ಟಿ ಅವರ ತಂಗಿ ಶಮಿತಾ ಅವರನ್ನು ನೆಟ್ಟಿಗರು ಸಖತ್ ಟ್ರೋಲ್ ಮಾಡುತ್ತಿದ್ದಾರೆ.

SHILPA SHETTY RAJ KUNDRA 2

ಜು.23ರಂದು ಡಿಸ್ನಿ ಪ್ಲಸ್ ಹಾಟ್‍ಸ್ಟಾರ್ ಮೂಲಕ ಹಂಗಮಾ 2 ಸಿನಿಮಾ ರಿಲೀಸ್ ಆಯಿತು. ಹಲವು ವರ್ಷಗಳ ಬಳಿಕ ಶಿಲ್ಪಾ ಶೆಟ್ಟಿ ನಟಿಸಿರುವ ಸಿನಿಮಾ ಇದು. ಅದಕ್ಕಾಗಿ ಅಕ್ಕನಿಗೆ ಶಮಿತಾ ಶೆಟ್ಟಿ ಶುಭ ಕೋರಿದ್ದಾರೆ. 14 ವರ್ಷಗಳ ನಂತರ ನಿನ್ನ ನಟನೆಯ ಹಂಗಾಮಾ 2 ರಿಲೀಸ್ ಆಗುತ್ತಿದೆ. ನಿನಗೆ ಶುಭವಾಗಲಿ. ನೀನು ಇದಕ್ಕಾಗಿ ಸಾಕಷ್ಟು ಪರಿಶ್ರಮ ಪಟ್ಟಿದ್ದೀಯ ಎನ್ನುವುದು ಗೊತ್ತು. ನಾನು ನಿನ್ನ ಜೊತೆ ಸದಾ ಇರುತ್ತೇನೆ. ನೀನು ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡಿದ್ದಿ. ಪ್ರತಿ ಬಾರಿ ಮತ್ತಷ್ಟು ಸ್ಟ್ರಾಂಗ್ ಆಗುತ್ತಿದ್ದಿ. ಈ ಕಷ್ಟವೂ ಕಳೆದು ಹೋಗುತ್ತದೆ. ಹಂಗಾಮಾ 2 ತಂಡಕ್ಕೆ ಆಲ್ ದಿ ಬೆಸ್ಟ್ ಎಂದು ಶಮಿತಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಸರ್, ನೀವು ನನ್ನನ್ನು ಸ್ತ್ರೀ ನಿಂದಕನಂತೆ ಬಿಂಬಿಸಿದ್ದೀರಿ: ಚಕ್ರವರ್ತಿ ಬೇಸರ

shamitashetty

ಈ ಪೋಸ್ಟ್​ಗೆ ಕಾಮೆಂಟ್ ಮಾಡಿರುವ ಬಹುತೇಕರು, ರಾಜ್ ಕುಂದ್ರಾ ವಿಚಾರವನ್ನು ಎಳೆದು ತಂದಿದ್ದಾರೆ. ತುಂಬಾ ಕಟುವಾಗಿ ಟ್ರೋಲ್ ಮಾಡಿದ್ದಾರೆ. ಅಂತಹ ಕೆಲವು ಕಾಮೆಂಟ್‍ಗಳು ಈಗ ಸಖತ್ ವೈರಲ್ ಆಗುತ್ತಿದೆ. ನಿಮ್ಮ ಅಕ್ಕ ನಮಗೆ ಬೆಳಗ್ಗಿನ ಯೋಗ ಪೋಸ್‍ಗಳನ್ನು ಕಲಿಸಿಕೊಡುತ್ತಾರೆ. ಆದರೆ ನಿಮ್ಮ ಬಾವ ರಾತ್ರಿಯ ಯೋಗಪೋಸ್‍ಗಳನ್ನು ಕಲಿಸಿಕೊಡುತ್ತಾರೆ ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ರಾಜ್ ಕುಂದ್ರಾ ಹೇಗಿದ್ದಾರೆ? ಅವರನ್ನು ಯಾಕೆ ಪೊಲೀಸರು ಹಿಡಿದುಕೊಂಡು ಹೋಗಿದ್ದಾರೆ? ಈ ಸಂದರ್ಭದಲ್ಲಿ ಶಿಲ್ಪಾಗಿಂತಲೂ ಹೆಚ್ಚು ಶುಭ ಹಾರೈಕೆ ಬೇಕಿರುವುದು ಅವರಿಗೆ ಎಂಬ ಇತ್ಯಾದಿ ಹಲವಾರು ಕಾಮೆಂಟ್‍ಗಳ ಮೂಲಕ ಜನ ಕಾಲೆಳೆದಿದ್ದಾರೆ. ಇದನ್ನೂ ಓದಿ:  ಪತಿ ಕಾಮಪ್ರಚೋದಕ ಚಿತ್ರಗಳನ್ನು ತೆಗೆಯುತ್ತಿದ್ದರೆ ವಿನಃ ಅಶ್ಲೀಲ ಚಿತ್ರವಲ್ಲ: ಶಿಲ್ಪಾ ಶೆಟ್ಟಿ

shamitashetty2

ತಮ್ಮ ಹಾಟ್‍ಶಾಟ್ಸ್ ಆ್ಯಪ್ ಮೂಲಕ ಅಶ್ಲೀಲ ಸಿನಿಮಾಗಳನ್ನು ರಾಜ್ ಕುಂದ್ರಾ ಪ್ರಸಾರ ಮಾಡುತ್ತಿದ್ದರು ಎಂಬ ಆರೋಪ ಇದೆ. ಅಲ್ಲದೆ ತಮ್ಮ ನಾದಿನಿ ಶಮಿತಾ ಶೆಟ್ಟಿ ಜೊತೆಗೂ ಅವರು ಒಂದು ಸಿನಿಮಾ ಮಾಡಿ, ಅದನ್ನು ಆ್ಯಪ್‍ನಲ್ಲಿ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು ಎಂಬ ವಿಷಯವನ್ನು ಇತ್ತೀಚೆಗೆ ನಟಿ ಗೆಹನಾ ವಸಿಷ್ಠ್ ಬಾಯಿ ಬಿಟ್ಟಿದ್ದರು. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಈಗ ನೆಟ್ಟಿಗರಿಂದ ಭಾರೀ ಟ್ರೋಲ್‍ಗೆ ಒಳಗಾಗುತ್ತಿದ್ದಾರೆ. ಈ ನಟಿಯರು ಮಾಡುವ ಸೋಶಿಯಲ್ ಮೀಡಿಯಾ ಪೋಸ್ಟ್​ಗೆ ಸಿಕ್ಕಾಪಟ್ಟೆ ನೆಗೆಟಿವ್ ಕಾಮೆಂಟ್‍ಗಳು ಬರುತ್ತಿವೆ.

Share This Article
Leave a Comment

Leave a Reply

Your email address will not be published. Required fields are marked *