ಬೆಂಗಳೂರು: ಕೋವಿಡ್ 19ನಿಂದಾಗಿ ಸದ್ಯ ಆನ್‌ಲೈನ್‌ನಲ್ಲಿ ನಡೆಯುತ್ತಿರುವ ಡಿಗ್ರಿ ತರಗತಿಗಳು ಅಕ್ಟೋಬರ್ 1 ರಿಂದ ಆಫ್‍ಲೈನ್ ಆಗಲಿದೆ. ಎಂದಿನಂತೆ ತರಗತಿ ಆರಂಭಿಸುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ.
ಕೊರೊನಾದೊಂದಿಗೆ ಬದುಕಬೇಕಿರುವ ಕಾರಣ ಉನ್ನತ ಶಿಕ್ಷಣ ಇಲಾಖೆ ಅಕ್ಟೋಬರ್ ತಿಂಗಳಿನಿಂದ ಡಿಗ್ರಿ ಕಾಲೇಜು ಆರಂಭಿಸಲು ಮುಂದಾಗುತ್ತಿದೆ. ಈಗ ಹೇಗೆ ಕಚೇರಿಗಳನ್ನು ತೆರೆಯಲು ಸರ್ಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆಯೋ ಅದೇ ರೀತಿಯಾಗಿ ಕಾಲೇಜಿನಲ್ಲಿ ಅಳವಡಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.
Advertisement
Advertisement
ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಅಧಿಕೃತವಾಗಿ ಪ್ರಕಟಿಸಿದ್ದಾರೆ.
Advertisement
ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ತಿಳಿಸಿದರು.
Advertisement
ಮಾರ್ಗಸೂಚಿ ಏನಿರಬಹುದು?
– ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಡ್ಡಾಯ
– ಪ್ರವೇಶದ್ವಾರದಲ್ಲಿ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಿ ಒಳಗಡೆ ಬಿಡಬೇಕು
– ಸ್ಯಾನಿಟೈಸ್ ವ್ಯವಸ್ಥೆ ಮಾಡಬೇಕು
– ಕಾಲೇಜ್ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳು ಗುಂಪು ಸೇರಬಾರದು
– ತರಗತಿಗಳಲ್ಲಿ 3 ಅಡಿ ಅಂತರದಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಬೇಕು (ಆಡಳಿತ ಮಂಡಳಿ ನೋಡಿಕೊಳ್ಳಬೇಕು.)
– ವಿವಿ ಕ್ಯಾಂಪಸ್‍ನಲ್ಲಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪಿಸಬೇಕು
– ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಸಹಾಯವಾಣಿ ಸ್ಥಾಪನೆ ಮಾಡಬೇಕು
– ಪ್ರೇಕ್ಷಕರಿಲ್ಲದೇ ಕ್ರೀಡಾ ಚಟುವಟಿಕೆ ನಡೆಯಬೇಕು
– ಗ್ರಂಥಾಲಯದಲ್ಲಿ ಹೆಚ್ಚು ವಿದ್ಯಾರ್ಥಿಗಳು ಸೇರದಂತೆ ಕ್ರಮವಹಿಸಬೇಕು