ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ಸಿನ ಅನೇಕ ನಾಯಕರು ಖಂಡನೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ರಾಜ್ಯ ಬಿಜೆಪಿ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದೆ. ಇದನ್ನೂ ಓದಿ: ಟ್ರಬಲ್ ಶೂಟರ್ ಇಂದು ಸಿಬಿಐಗೆ ಲಾಕ್ ಆಗಿದ್ದು ಹೇಗೆ?
ರಾಜ್ಯ ಬಿಜೆಪಿ ಟ್ವೀಟ್ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದೆ. “ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವೇ?. ಅಕ್ರಮಗಳ ಸರದಾರನನ್ನು ಜೈಲಿನಿಂದ ಮೆರವಣಿಗೆ ಮಾಡಿಕೊಂಡು ಬಂದು ಪಟ್ಟ ನೀಡುವಾಗಲೇ ಯೋಚಿಸಬೇಕಿತ್ತು” ಎಂದು ವ್ಯಂಗ್ಯ ಮಾಡಿದೆ. ಇದನ್ನೂ ಓದಿ: ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ- ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Advertisement
Advertisement
“ತನಿಖಾ ಸಂಸ್ಥೆಗಳು ಸ್ವಾಯತ್ತವಾಗಿರುತ್ತವೆ ಎಂಬುದು ಲೋಕಸತ್ಯ. ಸಿಬಿಐ ದಾಳಿಯನ್ನು ಖಂಡಿಸುವ ಕಾಂಗ್ರೆಸ್ ಪಕ್ಷ ಏಕೆ ಡಿ.ಕೆ.ಶಿವಕುಮಾರ್ ಅವರ ಅಕ್ರಮಗಳನ್ನು ಖಂಡಿಸುವುದಿಲ್ಲ?” ಎಂದು ರಾಜ್ಯ ಬಿಜೆಪಿ ಪ್ರಶ್ನೆ ಮಾಡಿದೆ.
Advertisement
“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ. ರಾಜಕೀಯ ದುಷ್ಟತನದ ಪರಮಾವಧಿ. ಅಷ್ಟೇ ಅಲ್ಲದೇ “ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಡಿಕೆಶಿ ಮನೆ ಮೇಲಿನ ಸಿಬಿಐ ದಾಳಿಯನ್ನು ಖಂಡಿಸಿದ್ದಾರೆ.
Advertisement
ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವೇ?
ಅಕ್ರಮಗಳ ಸರದಾರನನ್ನು ಜೈಲಿನಿಂದ ಮೆರವಣಿಗೆ ಮಾಡಿಕೊಂಡು ಬಂದು ಪಟ್ಟ ನೀಡುವಾಗಲೇ ಯೋಚಿಸಬೇಕಿತ್ತು,
ತನಿಖಾ ಸಂಸ್ಥೆಗಳು ಸ್ವಾಯತ್ತವಾಗಿರುತ್ತವೆ ಎಂಬುದು ಲೋಕಸತ್ಯ.
ಸಿಬಿಐ ದಾಳಿಯನ್ನು ಖಂಡಿಸುವ @INCKarnataka, ಏಕೆ @DKShivakumar ಅವರ ಅಕ್ರಮಗಳನ್ನು ಖಂಡಿಸುವುದಿಲ್ಲ?
— BJP Karnataka (@BJP4Karnataka) October 5, 2020
ಇದು ರಾಜಕೀಯ ದುರುದ್ದೇಶದಿಂದ ಆದ ದಾಳಿಯಾಗಿದೆ. ರಾಜ್ಯ ಸರ್ಕಾರ ಯಾವಾಗಲೋ ಅನುಮತಿ ನೀಡಿತ್ತು. ಆದರೆ ಉಪ ಚುನಾವಣೆ ಬಂದಾಗಲೇ ದಾಳಿ ಮಾಡಲಾಗಿದೆ. ಇಡಿ ಆಯ್ತು, ಸಿಬಿಐ, ಐಟಿ ಆಯ್ತು ಈಗ ಮತ್ತೆ ಸಿಬಿಐ ದಾಳಿ ಮಾಡಿದ್ದಾರೆ. ನಮ್ಮ ನಾಯಕರು ಸಮರ್ಥರು ಇದ್ದಾರೆ. ಅವರು ಹ್ಯಾಂಡಲ್ ಮಾಡುತ್ತಾರೆ. ಅಹ್ಮದ್ ಪಾಟೇಲ್‍ರ ಚುನಾವಣೆಯಲ್ಲೂ ದಾಳಿ ಮಾಡಿದ್ದರು. ಇದೀಗ ಮತ್ತೆ ದಾಳಿ ಮಾಡಿದ್ದಾರೆ ಎಂದು ಕೈ ಶಾಸಗಿ ಲಕ್ಷ್ಮಿ ಹೆಬ್ಬಾಳ್ಕರ್ ಗರಂ ಆಗಿದ್ದಾರೆ.