ಉಡುಪಿ: ಆರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಬಂಧಿಸಲಾಗಿದೆ. ಕುಂದಾಪುರ ತಾಲೂಕಿನಿಂದ ಭಟ್ಕಳಕ್ಕೆ ಪಿಕ್ ಅಪ್ ನಲ್ಲಿ ತುಂಬಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಶಬ್ಬೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಂದೂರು ಪೋಲಿಸರ ಮಿಂಚಿನ ಕಾರ್ಯಚರಣೆ ಮಾಡಿದ್ದು, ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಪಿ.ಎಸ್.ಐ ಪವನ್ ನಾಯಕ್ ಮತ್ತು ಸಿಬ್ಬಂದಿ ನೇತ್ರತ್ವದಲ್ಲಿ ಕಾರ್ಯಚರಣೆ ಮಾಡಲಾಗಿದೆ. ಖಚಿತ ಮಾಹಿತಿಯೊಂದಿಗೆ ಭಟ್ಕಳದಲ್ಲಿ ಕಾರ್ಯಚರಣೆ ನಡೆಸಿದ ಪೋಲಿಸರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ತಪಾಸಣೆ ನಡೆಸಿದಾಗ ಆರು ಗೋವುಗಳು ಇರುವುದು ಕಂಡು ಬಂದಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ ಉಡುಪಿ ಪ್ರವಾಸ- ಜಿಲ್ಲಾಸ್ಪತ್ರೆಗೆ ಗುದ್ದಲಿ ಪೂಜೆ
ಉಡುಪಿ ಜಿಲ್ಲೆಯ ಬೈಂದೂರಿನಿಂದಲೇ ಗೋವು ಸಾಗಾಟದ ವಾಹನವನ್ನು ಪೋಲಿಸರು ಹಿಂಬಾಲಿಸಿದ್ದಾರೆ. ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿ ಬಂಧನ ಪ್ರಕ್ರಿಯೆ ನಡೆದಿದೆ. ಪಿಕಪ್ ನಲ್ಲಿದ್ದ ಆರು ಗೋವನ್ನು ರಕ್ಷಣೆ ಮಾಡಲಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಈಶ್ವರಪ್ಪಗೆ ಮಂಡೆ ಸರಿ ಇಲ್ಲ, ಬಿಜೆಪಿ ಶೀಘ್ರ ಚಿಕಿತ್ಸೆ ಕೊಡಿಸಲಿ: ವಿನಯ್ ಕುಮಾರ್ ಸೊರಕೆ ಸಲಹೆ