ಚಿಕ್ಕಬಳ್ಳಾಪುರ: ಕಾನೂನು ಬಾಹಿರವಾಗಿ ಸ್ಫೋಟಕಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ರಮೇಶ್, ವೆಂಕಟೇಶ್, ವೇಣು ಹಾಗೂ ಯಾದಗಿರಿ ಎಂದು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕು ಸೋಮಾಕಲಹಳ್ಳಿ ಬಳಿ ಬೈಕ್‍ನಲ್ಲಿ ಮೂಟೆಗಳನ್ನು ಇಟ್ಟುಕೊಂಡು ಅನುಮಾನಸ್ಪದವಾಗಿ ಹೋಗುತ್ತಿದ್ದವರನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಂಗಾರದ ಮೋಹದ ರಾಣಿಯ ಮಹಾವಂಚನೆಯ ಕಥೆ – RBI ಹೆಸರಿನಲ್ಲಿ ನಕಲಿ ದಾಖಲೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಹಿಂದೆ ನಡೆದ ಗಣಿ ಬ್ಲಾಸ್ಟಿಂಗ್ ದುರಂತದಿಂದ ಆರು ಮಂದಿ ಸಾವನ್ನಪ್ಪಿದ್ದರು. ಈ ಘಟನೆ ನಂತರವೂ ಗಣಿ ಮಾಲೀಕರು ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಮತ್ತೆ ಅದೇ ಹಳೆಯ ರೀತಿ ನಿಯಮ ಬಾಹಿರವಾಗಿ ಸ್ಫೋಟಕಗಳ ಖರೀದಿ, ಸಾಗಾಟ ಮುಂದುವರಿಯುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ಸಾಕ್ಷಿಯಾಗಿದೆ.



