ಚೆನ್ನೈ: ಅಕ್ಷರ್ ಪಟೇಲ್ ಮತ್ತು ಅಶ್ವಿನ್ ಮಾರಕ ಅವರ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ತತ್ತರಿಸಿದ್ದು, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 317 ರನ್‌ಗಳಿಂದ ಗೆದ್ದುಕೊಂಡಿದೆ. ಈ ಮೂಲಕ 4 ಪಂದ್ಯಗಳ ಸರಣಿಯಲ್ಲಿ ಎರಡು ತಂಡಗಳು ಸಮಬಲ ಸಾಧಿಸಿದಂತಾಗಿದೆ.
ಗೆಲ್ಲಲು 482 ರನ್‌ಗಳ ಕಠಿಣ ಗುರಿಯನ್ನು ಪಡೆದ ಇಂಗ್ಲೆಂಡ್ ಇಂದು ಸ್ಪಿನ್ನರ್‌ಗಳ ಬಿಗಿಯಾದ ದಾಳಿಗೆ ಒದ್ದಾಡಿ 54.2 ಓವರ್‌ಗಳಲ್ಲಿ 164 ರನ್‌ಗಳಿಗೆ ಆಲೌಟ್ ಆಯ್ತು.
Advertisement
Advertisement
ಮೂರನೇ ದಿನದಾಟಕ್ಕೆ 3 ವಿಕೆಟ್ ಕಳೆದುಕೊಂಡು 53 ರನ್ ಗಳಿಸಿದ್ದ ಇಂಗ್ಲೆಂಡ್ ಇಂದು ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು. 26 ರನ್ ಗಳಿಸಿದ್ದ ಡಾನ್ ಲಾರೆನ್ಸ್ ಸ್ಟಂಪ್ ಔಟಾದರು. ನಾಯಕ ಜೋ ರೂಟ್ 33 ರನ್(92 ಎಸೆತ, 3 ಬೌಂಡರಿ) ಹೊಡೆದರೆ ಕೊನೆಯಲ್ಲಿ ಮೋಯಿನ್ ಆಲಿ ಸ್ಫೋಟಕ ಆಟವಾಡಿದರು.
Advertisement
ಸಿಕ್ಸರ್, ಬೌಂಡರಿ ಸಿಡಿಸಿ ಮುನ್ನುಗುತ್ತಿದ್ದ ಮೋಯಿನ್ ಆಲಿ 43 ರನ್(18 ಎಸೆತ, 3 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಕುಲದೀಪ್ ಎಸೆತದಲ್ಲಿ ಸ್ಟಂಪ್ ಔಟ್ ಆದರು. ಈ ಮೂಲಕ ಇಂಗ್ಲೆಂಡ್ ತನ್ನ ಇನ್ನಿಂಗ್ಸ್ ಮುಕ್ತಾಯಗೊಳಿಸಿತು.
Advertisement
ಭಾರತದ ಪರವಾಗಿ ಅಕ್ಷರ್ ಪಟೇಲ್ 5 ವಿಕೆಟ್ ಪಡೆದರೆ ಅಶ್ವಿನ್ 3 ವಿಕೆಟ್ ಪಡೆದರು. ಕುಲದೀಪ್ ಯಾದವ್ 2 ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್
ಭಾರತ ಮೊದಲ ಇನ್ನಿಂಗ್ಸ್ 329/10
ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 134/10
ಭಾರತ ಎರಡನೇ ಇನ್ನಿಂಗ್ಸ್ 286/10
ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 164/10