ಅಹಮದಾಬಾದ್: ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಮೊದಲ ದಿನ ಭಾರತ ಉತ್ತಮ ಸ್ಥಿತಿಯಲ್ಲಿದೆ.
ಹಗಲು ರಾತ್ರಿ ಪಿಂಕ್ ಬಾಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಅಕ್ಷರ್ ಪಟೇಲ್ ಅವರ ಸ್ಪಿನ್ ದಾಳಿಗೆ ತತ್ತರಿಸಿ 48.4 ಓವರ್‌ಗಳಲ್ಲಿ ಕೇವಲ 112 ರನ್‌ಗಳಿಗೆ ಆಲೌಟ್ ಆಯ್ತು.
Advertisement
Advertisement
ಆರಂಭಿಕ ಆಟಗಾರ ಜಾಕ್ ಕ್ರಾಲೆ 53 ರನ್(84 ಎಸೆತ, 10 ಬೌಂಡರಿ) ನಾಯಕ ಜೊ ರೂಟ್ 17 ರನ್ ಹೊಡೆದರು. ಆರಂಭದಿಂದಲೂ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಇಂಗ್ಲೆಂಡ್ ಅಂತಿಮವಾಗಿ 112 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಕೊನೆಗೊಳಿಸಿತು.
Advertisement
ಅಕ್ಷರ್ ಪಟೇಲ್ ತಾನು ಆಡಿದ ಎರಡು ಟೆಸ್ಟ್‌ಗಳಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಅಕ್ಷರ್ ಪಟೇಲ್ 21.4 ಓವರ್ ಎಸೆದು 38 ರನ್ ನೀಡಿ 6 ವಿಕೆಟ್ ಕಿತ್ತಿದ್ದಾರೆ. ಅಶ್ವಿನ್ 3 ವಿಕೆಟ್ ಕಿತ್ತರೆ, ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.
Advertisement
ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 33 ರನ್‌ಗಳಿಸುವಷ್ಟರಲ್ಲಿ ಶುಭಮನ್ ಗಿಲ್ ವಿಕೆಟ್ ಕಳೆದುಕೊಂಡಿತು. ತಂಡಕ್ಕೆ 1 ರನ್ ಸೇರ್ಪಡೆಯಾದ ಬೆನ್ನಲ್ಲೇ ಚೇತೇಶ್ವರ ಪೂಜಾರ ಶೂನ್ಯ ಸುತ್ತಿದರು.
34 ರನ್‌ಗಳಿಗೆ 2 ವಿಕೆಟ್ ಉರುಳಿ ಸಂಕಷ್ಟದಲ್ಲಿದ್ದಾಗ ಜೊತೆಯಾದ ಕೊಹ್ಲಿ ಮತ್ತು ರೋಹಿತ್ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿದರು. ಇಬ್ಬರು ಮೂರನೇ ವಿಕೆಟಿಗೆ 64 ರನ್ ಜೊತೆಯಾಟವಾಡಿದರು.
ಉತ್ತಮವಾಗಿ ಆಡುತ್ತಿದ್ದ ಕೊಹ್ಲಿ 27 ರನ್(58 ಎಸೆತ, 3 ಬೌಂಡರಿ) ಹೊಡೆದು ಔಟಾದರು. ಅಂತಿಮವಾಗಿ ಭಾರತ 33 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿದೆ. ದಿನದ ಅಂತ್ಯಕ್ಕೆ ರೋಹಿತ್ ಶರ್ಮಾ 57 ರನ್( 82 ಎಸೆತ, 9 ಬೌಂಡರಿ) ಮತ್ತು ಅಜಿಂಕ್ಯಾ ರಹಾನೆ 1 ರನ್ ಗಳಿಸಿ ನಾಳೆ ಬ್ಯಾಟಿಂಗ್ ಮುಂದುವರಿಸಲಿದ್ದಾರೆ.