‘ಅಕ್ಷರ ರಾಕ್ಷಸ’ ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಸಿಎಂ ಸಂತಾಪ

Public TV
2 Min Read
CM BS Yeddyurappa Ravi belagere

ಬೆಂಗಳೂರು: ತಮ್ಮ ಬರಹಗಳ ಮೂಲಕ ಕನ್ನಡಿಗರಿಗೆ ಓದಿನ ಹುಚ್ಚು ಹತ್ತಿಸಿದ್ದ ಅಕ್ಷರ ರಾಕ್ಷಸ ಖ್ಯಾತಿಯ ರವಿ ಬೆಳಗೆರೆ ಅವರ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸುಧಾಕರ್ ಅವರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಬಿಎಸ್‍ವೈ, ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ. ಪತ್ರಕರ್ತರಾಗಿ, ಲೇಖಕರಾಗಿ, ನಿರೂಪಕರಾಗಿ ಜನಪ್ರಿಯತೆ ಗಳಿಸಿದ್ದ ಅವರು, ಶಿಕ್ಷಣ ಸಂಸ್ಥೆಯನ್ನೂ ನಡೆಸುತ್ತಿದ್ದರು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಕುಟುಂಬದವರಿಗೆ, ಅಭಿಮಾನಿಗಳಿಗೆ, ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ನಿಮ್ಮ ಜೊತೆ ಇದ್ದೀನಿ ಕಣೋ ಅಂದಿದ್ರು: ರವಿ ಪುತ್ರ ಕಣ್ಣೀರು

ಸಚಿವ ಸುಧಾಕರ್ ಟ್ವೀಟ್ ಮಾಡಿ, ಖ್ಯಾತ ಲೇಖಕರು, ಹಿರಿಯ ಪತ್ರಕರ್ತರಾದ ರವಿ ಬೆಳೆಗೆರೆ ಅವರ ನಿಧನದಿಂದ ಕನ್ನಡ ಮಾಧ್ಯಮ ಲೋಕ ಬಡವಾಗಿದೆ. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಪಾತ್ರರಾಗಿದ್ದ ಬೆಳೆಗೆರೆ ಅವರು ತಮ್ಮ ನೇರೆ-ನಿಷ್ಠುರ ಬರವಣಿಗೆಯಿಂದ ಅಪಾರ ಓದುಗ ಬಳಗವನ್ನು ಹೊಂದಿದ್ದರು. , ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಸಾವು ಬಂದು ಕರೆದಾಗ ಅತ್ಲಾಗೆ ನೋಡೋಣ ನಡಿ ಅಂತ ಹೊರಟುಬಿಟ್ಟಿದ್ದಾರೆನೋ: ಯೋಗರಾಜ್ ಭಟ್

Share This Article
Leave a Comment

Leave a Reply

Your email address will not be published. Required fields are marked *