-ಕಟೀಲ್ ಅವ್ರೇ ನೀವು ಯಾರು ಪರ?
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರಿಸಿ, ಮರು ಪ್ರಶ್ನೆ ಹಾಕಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಪ್ರಶ್ನೆ ಮಾಡಿದ್ದರು. ನಳಿನ್ ಕುಮಾರ್ ಕಟೀಲ್ ಹೇಳಿಕೆಯ ಸುದ್ದಿಯನ್ನು ಪಬ್ಲಿಕ್ ಟಿವಿ ಬಿತ್ತರಿಸಿತ್ತು. ಪಬ್ಲಿಕ್ ಟಿವಿ ಸುದ್ದಿಯ ಸ್ಕ್ರೀನ್ ಶಾಟ್ ಫೋಟೋ ಹಂಚಿಕೊಂಡಿರುವ ಸಿದ್ದರಾಮಯ್ಯನವರು ತಿರುಗೇಟು ನೀಡಿದ್ದಾರೆ.
.@nalinkateel ಅವರೇ, ನಾವು ಮನುಷ್ಯರ ಪರ,
ಮನುಷ್ಯವಿರೋಧಿಗಳ ಪರ ಅಲ್ಲ,
ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ,
ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ.
ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ?
1/2 pic.twitter.com/y2ZN3rQqtA
— Siddaramaiah (@siddaramaiah) August 13, 2020
ಸಿದ್ದರಾಮಯ್ಯ ಟ್ವೀಟ್: ನಳಿನ್ ಕುಮಾರ್ ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ.
@nalinkateel ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ?
ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದು ಅಲ್ಲ? ಅವರ್ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು?
ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ?
2/2 pic.twitter.com/3reEsV5Fli
— Siddaramaiah (@siddaramaiah) August 13, 2020
ನಳಿನ್ ಕುಮಾರ್ ಕಟೀಲ್ ಅವರೇ, ನೀವು ದಲಿತರ ಪರವೋ? ಹಿಂದೂಗಳ ಪರವೋ? ನೀವೊಬ್ಬ ಹಿಂದೂವಾದರೆ, ಅಖಂಡ ಶ್ರೀನಿವಾಸಮೂರ್ತಿ ಯಾಕೆ ಹಿಂದೂ ಅಲ್ಲ? ಅವರ್ಯಾಕೆ ಹಿಂದೂ ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ, ಡಿಕೆಶಿ ದಲಿತ ಪರವೋ ಇಲ್ಲ ಭಯೋತ್ಪಾದಕರ ಪರವೋ: ಕಟೀಲ್ ಪ್ರಶ್ನೆhttps://t.co/ZELI3eMlLn#Siddaramaiah #DKShivakumar #NalinkumarKateel #BJP #Congress @nalinkateel @DKShivakumar @siddaramaiah
— PublicTV (@publictvnews) August 13, 2020